ಲೋಕಸಭೆ ಚುನಾವಣೆ: 82 ಅಭ್ಯರ್ಥಿಗಳ ನಾಮಪತ್ರ ಮಾತ್ರ ಕ್ರಮಬದ್ಧ

ಬೆಂಗಳೂರು, ಮಾರ್ಚ್ 28: ಕರ್ನಾಟಕದಲ್ಲಿ ಏಪ್ರಿಲ್ 18ರಂದು ಮೊದಲ ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಅದರಲ್ಲಿ 82 ನಾಮಪತ್ರಗಳು ಮಾತ್ರ ಕ್ರಮಬದ್ಧವಾಗಿದೆ. ಬೆಂಗಳೂರು ನಗರದ ಮೂರು ಲೋಕಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಬುಧವಾರ ನಡೆಯಿತು. ಬೆಂಗಳೂರು ಕೇಂದ್ರ, ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳಿಂದ ಒಟ್ಟು 100 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತವಾಗಿದೆ.

ಇದರಲ್ಲಿ 18 ಮಂದಿಯ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕೃತಗೊಳಿಸಿದ್ದಾರೆ. ಬೆಂಗಳೂರು ಕೇಂದ್ರದಿಂದ 5, ದಕ್ಷಿಣದಿಂದ 9 ಮತ್ತು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 4 ನಾಮಪತ್ರ ತಿರಸ್ಕೃತವಾಗಿದೆ. ನಾಮಪತ್ರ ಹಿಂಪಡೆಯಲು ಮಾ.29 ಅಂತಿಮ ದಿನವಾಗಿದೆ.

lok sabha elections 2019 82 nominations are accepted in Bengaluru

ಆ ಬಳಿಕ ಎಷ್ಟು ಮಂದಿ ಕಣದಲ್ಲಿರಲಿದ್ದಾರೆ ಎನ್ನುವ ನಿಖರ ಮಾಹಿತಿ ಲಭ್ಯವಾಗಲಿದೆ. ಮೂರು ಕ್ಷೇತ್ರಗಳಲ್ಲಿ ಉಮೇದಯವಾರಿಕೆ ಸಲ್ಲಿಸಿರುವ ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+