ಕಾಂಗ್ರೆಸ್‌ಗೆ ಪ್ರಕಾಶ್ ರೈ ಬೆಂಬಲ!: ಸುಳ್ಳು ಸುದ್ದಿಗಾಗಿ ರಿಜ್ವಾನ್ ವಿರುದ್ಧ ಆಕ್ರೋಶ
ಬೆಂಗಳೂರು, ಏಪ್ರಿಲ್ 17: ಚುನಾವಣೆಗೆ ಒಂದು ದಿನ ಬಾಕಿ ಇರುವಂತೆಯೇ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್ ರೈ ಅವರು ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ವಿರುದ್ಧ ಹರಿಹಾಯ್ದಿದ್ದಾರೆ.
ತಾವು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಬೆಂಬಲ ನೀಡುತ್ತಿರುವಂತೆ ಸುಳ್ಳು ಸುದ್ದಿಗಳನ್ನು ವಾಟ್ಸಾಪ್‌ಗಳಲ್ಲಿ ಹರಿಬಿಡಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ, ಅರ್ಷದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾರ್ಯಕ್ರಮವೊಂದರಲ್ಲಿ ಪ್ರಕಾಶ್ ರೈ ಹಾಗೂ ರಿಜ್ವಾನ್ ಅರ್ಷದ್ ಜತೆಗೆ ಇರುವ ಚಿತ್ರವನ್ನು ಬಳಸಿಕೊಂಡು ಚುನಾವಣೆಯ ಮುನ್ನಾದಿನವಾದ ಬುಧವಾರ ಕಾಂಗ್ರೆಸ್ ಅಭ್ಯರ್ಥಿಯಾದ ರಿಜ್ವಾನ್ ಅರ್ಷದ್ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿಸಲಾಗಿದೆ.
ಇಬ್ಬರೂ ಅಭ್ಯರ್ಥಿಗಳು ಪರಸ್ಪರ ಕೈಕುಲುಕುತ್ತಿರುವ ಚಿತ್ರವನ್ನು ಪ್ರಕಟಿಸಿ, ಅದರಲ್ಲಿ 'ಪ್ರಕಾಶ್ ರಾಜ್ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಮತ ನೀಡಿ ಅದನ್ನು ವ್ಯರ್ಥ ಮಾಡಿಕೊಳ್ಳಬೇಡಿ' ಎಂದು ಬರೆಯಲಾಗಿದೆ. ಇದು ಪ್ರಕಾಶ್ ರೈ ಅವರಲ್ಲಿ ಅಸಮಾಧಾನ ಉಂಟುಮಾಡಿದೆ. ತಮ್ಮ ಸ್ವಂತ ಬಲದಿಂದ ಮತ ಗಳಿಸಿಕೊಳ್ಳಲು ಆಗದ ರಿಜ್ವಾನ್ ಅರ್ಷದ್ ಅವರೇ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ಸಿಟ್ಟು ತೋರಿಸಿಕೊಂಡಿದ್ದಾರೆ.
ಬಿಜೆಪಿ ಕಾಂಗ್ರೆಸ್ ಎರಡೂ ಒಂದೇ
ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಕಾಶ್ ರೈ ಮತ್ತು ಅವರ ಬೆಂಬಲಿಗರು, ಈ ಚಿತ್ರವನ್ನು ಕಾಂಗ್ರೆಸ್ ಪ್ರಸಾರ ಮಾಡುತ್ತಿದೆ. ರಿಜ್ವಾನ್ ಅರ್ಷದ್ ಅವರು ತುಂಬಾ ನಾಚಿಕೆಗೇಡಿ. ಅವರು ಸ್ವಂತ ಹೆಸರಿನಿಂದ ಮತಗಳನ್ನು ಸಂಪಾದಿಸಿಕೊಳ್ಳಲಾರರು. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಒಂದೇ ಎಂಬುದು ಸಾಬೀತಾಗಿದೆ ಎಂದು ಪ್ರಕಾಶ್ ರೈ ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
| Array |
ಕ್ರೀಡಾಮನೋಭಾವ ಬೆಳೆಸಿಕೊಳ್ಳಿ
ಪ್ರಕಾಶ್ ರಾಜ್ ಮತ್ತು ಅರ್ಷದ್ ರಿಜ್ವಾನ್ ಅವರ ನಕಲಿ ಚಿತ್ರಗಳು ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿದ್ದು, ಪ್ರಕಾಶ್ ರೈ ಕಾಂಗ್ರೆಸ್ ಜತೆಗೆ ಇದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಪ್ರಕಾಶ್ ರಾಜ್ ಬೆಂಗಳೂರು ಕೇಂದ್ರ ಕ್ಷೇತ್ರದ ನಿಮ್ಮ ಅಭ್ಯರ್ಥಿ. ಅರ್ಷದ್ ರಿಜ್ವಾನ್ ಅವರೇ ನಿಮ್ಮದೇ ಮತಗಳನ್ನು ಸಂಪಾದಿಸಲು ಅಗತ್ಯವಾದಷ್ಟು ಧೈರ್ಯ ಪಡೆದುಕೊಳ್ಳಿ. ಉತ್ತಮ ಕ್ರೀಡಾಮನೋಭಾವ ಬೆಳೆಸಿಕೊಳ್ಳಿ ಎಂದು ಟ್ವಿಟ್ಟರ್‌ನಲ್ಲಿ ರೈ ಕಿಡಿಕಾರಿದ್ದಾರೆ.
|
ವದಂತಿಗೆ ಕವಿಗೊಡಬೇಡಿ
ಪ್ರಕಾಶ್ ರಾಜ್ ಅವರು ನಮ್ಮೊಂದಿಗೆ ಕೈಜೋಡಿಸಿದ್ದಾರೆ ಎಂಬ ಕೆಲವು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಅಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜನರಿಗೆ ಮನವಿ ಮಾಡುತ್ತೇನೆ. ನಾನು ಅಭಿವೃದ್ಧಿಯ ಅಜೆಂಡಾದೊಂದಿಗೆ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನನಗೆ ನನ್ನ ಜನರ ಬೆಂಬಲವಿದೆ. ಪ್ರಕಾಶ್ ರೈ ಒಬ್ಬ ಸ್ವತಂತ್ರ ಅಭ್ಯರ್ಥಿ. ಅವರಿಗೆ ಒಳಿತಾಗಲಿ ಎಂದು ಹಾರೈಸುತ್ತೇನೆ ಎಂದು ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ ನೀಡಿದ್ದಾರೆ.

ಯಾರ ವಿರುದ್ಧವೂ ಸ್ಪರ್ಧೆ ಅಲ್ಲ
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಕಾಶ್ ರೈ, ತಾವು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ ಎಂದು ಪ್ರಚಾರದ ವೇಳೆ ಹೇಳಿದ್ದರು. ತಮ್ಮ ಹೋರಾಟ ಜನರಿಗಾಗಿ ಎಂದು ತಿಳಿಸಿದ್ದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಉತ್ತಮ ನಾಯಕನನ್ನು ಆಯ್ಕೆ ಮಾಡಿದರೆ ಪ್ರಜೆಗಳು ಗೆದ್ದಂತೆ. ಕೆಟ್ಟ ನಾಯಕನನ್ನು ಆಯ್ಕೆ ಮಾಡಿದರೆ ಪ್ರಜೆಗಳು ಸೋತಂತೆ ಎಂದು ಹೇಳಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications