ಲೋಕಸಭಾ ಚುನಾವಣೆ, ಕರ್ನಾಟಕದಲ್ಲಿ ಇಲ್ಲಿಯವರೆಗೆ 54 ಲಕ್ಷ ರೂ ನಗದು ವಶ
ಬೆಂಗಳೂರು, ಮಾರ್ಚ್ 15: ಲೋಕಸಭಾ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆಗಾಗಿ ರಚಿಸಲಾದ ತಂಡಗಳು ಈವರೆಗೆ 54ಲಕ್ಷ ರೂ ನಗದನ್ನು ವಶಪಡಿಸಿಕೊಂಡಿವೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ 21 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿವೆ. ಅಲ್ಲದೆ ಸುಮಾರು 80 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.ಕಳೆದ 24 ಗಂಟೆಗಳಲ್ಲಿ ಸ್ಥಿರ ಕಣ್ಗಾವಲು ತಂಡಗಳು 5 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್ ತಂಡಗಳು 5.83 ಲಕ್ಷ ನಗದು ಮತ್ತು 20 ಸಾವಿರ ಮೌಲ್ಯದ ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿವೆ.
ಜಮಖಂಡಿ ಬಿಜೆಪಿ ಮುಖಂಡ ಜಗದೀಶ ಗುಡಗುಂಟೆ ಅವರು ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 20 ಲಕ್ಷ ನಗದನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗದಗ ಜಿಲ್ಲೆಯ ನರಗುಂದ ಬಳಿ ತಪಾಸಣೆ ಠಾಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 76 ಲಕ್ಷ ಮೊತ್ತದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications