ಬೆಂ.ಉತ್ತರ ಜೆಡಿಎಸ್ ಶಾಸಕರ ಜೊತೆ ಎಚ್‌ಡಿ ದೇವೇಗೌಡರ ಸಭೆ
ಬೆಂಗಳೂರು, ಮಾರ್ಚ್ 27: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಭೆ ನಡೆಯಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜೆಪಿ ಭವನದಲ್ಲಿ ಸಭೆ ನಡೆಯಲಿದ್ದು,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡರ ಗೆಲುವಿಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶ್ರಮಿಸುವಂತೆ ಗೌಡರು ಸಲಹೆ ಮಾಡಲಿದ್ದು, ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ರೂಪಿಸಬೇಕಾದ ಚುನಾವಣಾ ಕಾರ್ಯತಂತ್ರಗಳ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್‍ಗೆ ಬಿಟ್ಟುಕೊಟ್ಟಿತ್ತು.
ಆದರೆ ಕೊನೆ ಗಳಿಗೆಯಲ್ಲಿ ಜೆಡಿಎಸ್ ಈ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಕೃಷ್ಣಭೈರೇಗೌಡ ಅವರು ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ. ಲೋಕಸಭಾ ಚುನಾವಣೆಗೆ ಮುಂದಿನ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ.












Click it and Unblock the Notifications