ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕೃಷ್ಣ ಬೈರೇಗೌಡ ಕಣಕ್ಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 25: ಅಂತೂ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಸೋಮವಾರ ರಾತ್ರಿ ಉತ್ತರ ಸಿಕ್ಕಿದೆ. ಸಚಿವ ಕೃಷ್ಣ ಬೈರೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಮಂಗಳವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಭಾನುವಾರ ಮಧ್ಯರಾತ್ರಿ ಹೊತ್ತಿಗೆ ಕಾಂಗ್ರೆಸ್ ಗೆ ಜೆಡಿಎಸ್ ನಿಂದ ಬೆಂಗಳೂರು ಉತ್ತರ ಕ್ಷೇತ್ರ ಬಿಟ್ಟುಕೊಟ್ಟ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಆ ನಂತರ ಕೂಡ ಯಾರು ಅಭ್ಯರ್ಥಿ ಆಗುತ್ತಾರೆ ಎಂಬ ಬಗ್ಗೆ ನಿರ್ಧಾರ ಅಂತಿಮ ಆಗಿರಲಿಲ್ಲ.

Lok Sabha Elections 2019: Krishna Byre Gowda Contest from Bengaluru North

ತುಮಕೂರಿನಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಣಕ್ಕೆ ಇಳಿದಿದ್ದಾರೆ. ಹಾಲಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನಿಂದ ಆಯ್ಕೆ ಆಗಿದ್ದರು. ಅವರು ಅಸಮಾಧಾನ ಹೊರಹಾಕಿದ್ದರು. ಅವರನ್ನು ಬೆಂಗಳೂರು ಉತ್ತರದಿಂದ ಸ್ಪರ್ಧಿಸುವಂತೆ ಕೇಳಿಕೊಳ್ಳಲಾಗಿತ್ತು ಅವರು ಒಪ್ಪಿಕೊಳ್ಳದೆ, ತುಮಕೂರಿನಿಂದ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?

ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಣದಲ್ಲಿದ್ದಾರೆ.

English summary
Lok Sabha Elections 2019: Krishna Byre Gowda Contest from Bengaluru North as Congress candidate against BJP's DV Sadananda Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X