ಬಸವನಗುಡಿಯಲ್ಲಿ ಮತಚಲಾಯಿಸಿದ ತೇಜಸ್ವಿನಿ ಅನಂತಕುಮಾರ್
ಬೆಂಗಳೂರು, ಏಪ್ರಿಲ್ 18: ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಲೋಕಸಭೆ ಚುನಾವಣೆಗೆ ಗುರುವಾರ ಬೆಂಗಳೂರಿನ ಬಸವನಗುಡಿಯಲ್ಲಿ ಮತಚಲಾಯಿಸಿದರು. ಅವರೊಟ್ಟಿಗೆ ಕುಟುಂಬಸ್ಥರೂ ಜೊತೆಯಾಗಿದ್ದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅವರು ಮತದಾನದ ಹಕ್ಕು ಪಡೆದಿದ್ದು, ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸವನಗುಡಿಯ ವಾಸವಿ ವಿದ್ಯಾ ನಿಕೇತನ ಶಾಲೆಯ ಮತಗಟ್ಟೆಯಲ್ಲಿ ಅವರು ಮತಚಲಾಯಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅವರ ಪತಿ ಕೇಂದ್ರದ ಮಾಜಿ ಸಚಿವ ದಿ.ಅನಂತ ಕುಮಾರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸತತ ಆರು ಬಾರ ಗೆಲುವು ಸಾಧಿಸಿದ್ದರು. ಅವರು ಅನಾರೋಗ್ಯದ ಕಾರಣ ಅಸುನೀಗಿದ್ದರಿಂದ ಈ ಬಾರಿ ತೇಜಸ್ವಿನಿ ಅವರನ್ನೇ ಈ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿಸಬೇಕೆಂದು ಮೊದಲಿಗೆ ಬಿಜೆಪಿ ವರಿಷ್ಟರು ನಿರ್ಧರಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ತೇಜಸ್ವಿನಿ ಅವರ ಬದಲು ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿತು.

ಕಾಂಗ್ರೆಸ್ ನಿಂದ ಈ ಕ್ಷೇತ್ರದಲ್ಲಿ ಬಿಕೆ ಹರಿಪ್ರಸಾದ್ ಸ್ಪರ್ಧಿಸಿದ್ದಾರೆ. ಗುರುವಾರ ಈ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ಮೇ 23 ರಂಡು ಫಲಿತಾಂಶ ಹೊರಬೀಳಲಿದೆ.












Click it and Unblock the Notifications