Vote from Home: ಬೆಂಗಳೂರಲ್ಲಿ ಎರಡೇ ದಿನದಲ್ಲಿ ಮನೆಯಿಂದ ಮತದಾನ ಬಹುತೇಕ ಪೂರ್ಣ: ಎಷ್ಟಾಗಿದೆ? ವಿವರ
ಬೆಂಗಳೂರು, ಏಪ್ರಿಲ್ 14: ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಕೊಂಡ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು (AVSC) ಹಾಗೂ ವಿಶೇಷ ಚೇತನರು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು) ಪೈಕಿ ಎರಡೇ ದಿನದಲ್ಲಿ ಶೇಕಡಾ 86.89 ರಷ್ಟು ಮತದಾನ ಪೂರ್ಣಗೊಂಡಿದೆ.
ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಹಿತಿ ನೀಡಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಿವೆ. ಇದರಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರು ಸೇರಿ ಒಟ್ಟು 6407 ಮಂದಿ ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದರು.

ಶನಿವಾರ ಏಪ್ರಿಲ್ 13ರಿಂದ ಮನೆಯಿಂದ ಮತದಾನ ಆರಂಭವಾಗಿದೆ. ನೆನ್ನೆ ಮತ್ತು ಇಂದು ಭಾನುವಾರವರೆಗೆ ಎರಡೇ ದಿನದಲ್ಲಿನೋಂದಾಯಿತರ ಪೈಕಿ 5567 (ಶೇ.86.89) ಮತದಾರರು ಮತದಾನ ಮಾಡಿದ್ದಾರೆ. ನೋಂದಾಯಿತರ ಮನೆ ಮನೆಗಳಿಗೆ ತೆರಳಿದ ಚುನಾವಣಾಧಿಕಾರಿಗಳು ಗೌಪ್ಯವಾಗಿ ಮತದಾನ ಮಾಡಿಸಿಕೊಂಡರು. ಈ ವೇಳೆ ವಿಡಿಯೋ ಚಿತ್ರೀಕರಣ, ಫೋಟೋ ಕ್ಲಿಕ್ಕಿಸಲಾಯಿತು.
30 ಮಂದಿ ಸಾವು, 30 ಗೈರು
ಮತದಾನಕ್ಕೆ ನೋಂದಾಯಿತರ ಪೈಕಿ ಕಳೆದ ಎರಡು ದಿನದಲ್ಲಿ 30 ಮಂದಿ ಮೃತಪಟ್ಟಿದ್ದಾರೆ. 30 ಮಂದಿ ಮತದಾರರು ಗೈರಾಗಿದ್ದಾರೆ. ಮೂರು ಮಂದಿ ನೋಂದಾಯಿಸಿಕೊಂಡು ಮತ ಹಾಕಲು ನಿರಾಕಿರಿಸಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತದಾನ ವೇಳೆ ಯಾವುದೆ ತೊಂದರೆಯಿಲ್ಲದೆ/ಅಡೆತಡೆಗಳಲ್ಲಿದೆ ಎಲ್ಲಾ ಕಡೆ ಸುಸೂತ್ರವಾಗಿ, ನಿಯಮಬದ್ಧವಾಗಿ, ಯಶಸ್ವಿಯಾಗಿ ಮನೆ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೆತನರ ಮತದಾನವನ್ನು ನಡೆಸಲಾಗಿದೆ.

ಒಟ್ಟು ಮತದಾರರ ಪ್ರಮಾಣ?
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟವರ ಸಂಖ್ಯೆ 95,128 ಇದ್ದರೆ, 22,222 ವಿಶೇಷ ಚೇತನರಿದ್ದಾರೆ. ಈ ಪೈಕಿ ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ.
ಮತದಾನ ಪ್ರಕ್ರಿಯೆಯ ವಿಡಿಯೋ ಸೆರೆ
ನಂತರ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ. ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ.
ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಚುನಾವನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications