ಎರಡನೇ ದಿನಕ್ಕೆ ಕಾಲಿಟ್ಟ ಲೋಕಸತ್ತಾ ಉಪವಾಸ
ಬೆಂಗಳೂರು, ಡಿ.29 : ಕೆಪಿಎಸ್‍ಸಿ ಹಗರಕ್ಕೆ ಸಂಬಂಧಿಸಿದಂತೆ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಸತ್ತಾ ಪಕ್ಷ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೆಪಿಎಸ್‍ಸಿ ಹಗರಣದ ಕುರಿತು ಸಿಐಡಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ದಿನದಿಂದ ಲೋಕಸತ್ತಾ ಪ್ರತಿಭಟನೆ ನಡೆಸುತ್ತಿದೆ. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಲೋಕಸತ್ತಾ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಭಾನುವಾರಕ್ಕೆ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕೆಪಿಎಸ್‍ಸಿಯಲ್ಲಿ ನಡೆಯುತ್ತಿರು ಭ್ರಷ್ಟಾಚಾರವನ್ನು ತಡೆಗಟ್ಟಬೇಕು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪಕ್ಷ ಒತ್ತಾಯಿಸುತ್ತಿದೆ. [ಕೆಪಿಎಸ್‌ಸಿ ಹಗರಣದ ಬಗ್ಗೆ ಕ್ರಮ ಕೈಗೊಳ್ಳಿ]

ಕೆಪಿಎಸ್‍ಸಿಯಲ್ಲಿನ ನೇಮಕಾತಿ ಹಗರಣದ ಕುರಿತ ವರದಿಯನ್ನು ಸಿಐಡಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದೆ. ಲೋಕಸತ್ತಾ ಪಕ್ಷವು ಸಹ ಕೆಪಿಎಸ್‍ಸಿ ಕಛೇರಿ ಮುಂದೆ ಸಿಐಡಿ ವರದಿಯನ್ನು ಹಂಚುವ ಮೂಲಕ ಅದನ್ನು ಬಹಿರಂಗಗೊಳಿಸಿತ್ತು. ಆದರೆ, ಭ್ರಷ್ಟರನ್ನು ರಕ್ಷಿಸುತ್ತಿರುವ ಸರ್ಕಾರ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ವಿರೋಧಿಸಿ ಪಕ್ಷ ಉಪವಾಸ ಸತ್ಯಾಗ್ರಹ ಆರಂಭಿಸಿದೆ.
ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಲೋಕಸತ್ತಾ ವಿಚಾರವಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಈಗಾಗಲೇ ಸರ್ಕಾರದ ಕರ್ತವ್ಯ ಲೋಪದ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಭೇಟಿಯ ಕಾಲಾವಕಾಶವನ್ನು ಕೇಳಿದೆ.
ಸರ್ಕಾರ ಹೀಗೆ ಭ್ರಷ್ಟರ ರಕ್ಷಣೆ ಮಾಡುತ್ತಿದ್ದರೆ ದೆಹಲಿ ವಿಧಾನಸಭೆಯಲ್ಲಿ ಬಂದ ಚುನಾವನಾ ಫಲಿತಾಂಶ ರಾಜ್ಯದಲ್ಲೂ ಬರಲಿದೆ ಎಂದು ಪಕ್ಷ ಹೇಳಿದೆ. ಪ್ರಾಮಾಣಿಕ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿಯನ್ನು ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ ಭ್ರಷ್ಟಾಚಾರದಿಂದ ಕೊಳೆತು ನಾರುತ್ತಿದೆ ಎಂದು ಪಕ್ಷ ಆರೋಪಿಸಿದೆ.
ಪಕ್ಷದ ಹೋರಾಟಕ್ಕೆ ಪಕ್ಷಾತೀತವಾದ ಬೆಂಬಲ ವ್ಯಕ್ತವಾಗುತ್ತಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್. ಎಸ್. ದೊರೆಸ್ವಾಮಿ, ಜನತಾದಳ (ಯು) ನ ರಾಜ್ಯ ಅಧ್ಯಕ್ಷರಾದ ಡಾ. ಎಂ.ಪಿ. ನಾಡಗೌಡ ಮತ್ತು ಇತರ ಮುಖಂಡರುಗಳು ಉಪವಾಸ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.












Click it and Unblock the Notifications