ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಕಲಿ ಬಿಲ್ ಹಗರಣ, ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಮೇ 6 : ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಮುನಿರತ್ನ ಅವರು ಮೊದಲ ಆರೋಪಿಯಾಗಿದ್ದಾರೆ.

10 ಕೋಟಿ ರೂ. ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ನೇತೃತ್ವದ ತಂಡ ತನಿಖೆ ನಡೆಸಲಿದೆ. ಅಗತ್ಯವಾದರೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. [ಮುನಿರತ್ನ ಕಟ್ಟಡದಲ್ಲಿ ಬಿಬಿಎಂಪಿ ಕಡತ]

Munirathna

ಬಿಬಿಎಂಪಿಯ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಇತರರ ವಿರುದ್ಧ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಮಗಾರಿಗಳನ್ನು ನಡೆಸದೇ ನಕಲಿ ಬಿಲ್ ಸೃಷ್ಟಿ ಮಾಡಿ ಕೋಟ್ಯಂತರ ರೂ. ಅವ್ಯವಹಾರ ಮಾಡಿದ್ದಾರೆ ಎಂಬುದು ಆರೋಪ. ಶಾಸಕ ಮುನಿರತ್ನ ಹಾಗೂ ಪಾಲಿಕೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಸ್ವಯಂ ಪ್ರೇರಿತ ದೂರು ದಾಖಲಾಗಿದೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ]

ಏನಿದು ಅವ್ಯವಹಾರ : ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರಕ್ಕೆ ಸಿಎಂ ನಗರೋತ್ಥಾನ ಯೋಜನೆ ಅಡಿ 45 ಕೋಟಿ ರೂ. ಬಿಡುಗಡೆ ಆಗಿತ್ತು. ಈ ಪೈಕಿ 10 ಕೋಟಿ ರೂ. ಅವ್ಯವಹಾರವಾಗಿದೆ ಎಂಬುದು ಆರೋಪ. ಈ ಬಗ್ಗೆ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಎಇಗೆ ನ್ಯಾಯಾಂಗ ಬಂಧನ : ಪ್ರಕರಣದಲ್ಲಿ ಆರೋಪಿಯಾಗಿರುವ ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ವಿಜಯಕುಮಾರ್ ಅವರನ್ನು ಹೆಚ್ಚಿನ ತನಿಖೆಗೆ ಸೋಮವಾರ ವಶಕ್ಕೆ ಪಡೆಯಲಾಗಿತ್ತು. ಮಂಗಳವಾರ ಅವರನ್ನು ಲೋಕಾಯುಕ್ತ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

English summary
Karnataka Lokayukta Police on Tuesday filed an FIR against Rajarajeshwari Nagar Congress MLA Munirathna Naidu and others in the Bruhat Bangalore Mahanagara Palike billing scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X