ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು, ಏ. 7 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಮುಖ್ಯ ಲೆಕ್ಕಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯತ್ತಿದೆ.
ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಡಿವೈಎಸ್ಪಿ ವೆಂಕಟಸ್ವಾಮಿ ನೇತೃತ್ವದ ತಂಡ ಮುಖ್ಯ ಲೆಕ್ಕಾಧಿಕಾರಿ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದೆ. ಕಚೇರಿಯಲ್ಲಿನ ಕಡತಗಳನ್ನು ವಶಕ್ಕೆ ಪಡೆದು ಮುಖ್ಯ ಲೆಕ್ಕಾಧಿಕಾರಿ ಕನಕರಾಜ್ ಮತ್ತು ನಾರಾಯಣಸ್ವಾಮಿ ಎಂಬ ಅಧಿಕಾರಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ. ಗುತ್ತಿಗೆದಾರರಿಗೆ ಹಣ ಪಾವತಿ ಪಾರದರ್ಶಕವಾಗಿಲ್ಲ ಮುಂತಾದ ಆರೋಪಗಳ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. [ಬಿಬಿಎಂಪಿ ವಿಭಜನೆ ಪ್ರಸ್ತಾಪ ರಾಜ್ಯಪಾಲರ ಮುಂದೆ]
ಲೋಕಾಯುಕ್ತ ಪೊಲೀಸರು ಮುಖ್ಯ ಲೆಕ್ಕಾಧಿಕಾರಿ ಕನಕರಾಜ್ ಮತ್ತು ನಾರಾಯಣಸ್ವಾಮಿ ಅವರ ವಿಚಾರಣೆ ನಂತರ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಕನಕರಾಜ್ ಅವರ ಕಚೇರಿಯ ಹಲವು ಕಡತಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.











Click it and Unblock the Notifications