ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. 4 ಲಕ್ಷ ಹಣದೊಂದಿಗೆ ಅಧಿಕಾರಿ, ಅವರ ಪಿಎ ವಶಕ್ಕೆ ಪಡೆಯಲಾಗಿದೆ.

ಸೋಮವಾರ ಮಧ್ಯಾಹ್ನ ಮಲ್ಲೇಶ್ವರದಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿಯಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ.

ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ

Lokayukta Raid On BBMP West Zone Office Malleswaram

ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಈ ದೂರಿನ ಅನ್ವಯವೇ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ.

ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಖಾತೆ ಬದಲಾವಣೆ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಸೋಮವಾರ ಲಂಚ ನೀಡಲು ಕಚೇರಿಗೆ ಆಗಮಿಸುವ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಲೋಕಾಯುಕ್ತದಲ್ಲಿ ಎಸಿಬಿ ವಿಲೀನ: ಎಷ್ಟು ಶಾಸಕರ ವಿರುದ್ಧ ಎಸಿಬಿ ಕೇಸು ದಾಖಲಿಸಿತ್ತು ? ಲೋಕಾಯುಕ್ತದಲ್ಲಿ ಎಸಿಬಿ ವಿಲೀನ: ಎಷ್ಟು ಶಾಸಕರ ವಿರುದ್ಧ ಎಸಿಬಿ ಕೇಸು ದಾಖಲಿಸಿತ್ತು ?

ಡಿವೈಸ್‌ಪಿ ಶಂಕರನಾರಾಯಣ, ಮಂಜಯ್ಯ ನೇತೃತ್ವದಲ್ಲಿ ಲೋಕಾಯುಕ್ತ ವಿಭಾಗದ 8 ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಪಿಎ ಉಮೇಶ್ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಖಾತೆ ಬದಲಾವಣೆ ಮಾಡಲು ನಾಲ್ಕೂವರೆ ಲಕ್ಷಕ್ಕೆ ಬೇಡಿಕೆ ಇಡಲಾಗಿತ್ತು ಎಂಬುದು ಆರೋಪವಾಗಿದೆ.

ಕರ್ನಾಟಕ ಹೈಕೋರ್ಟ್ ಆದೇಶದ ಅನ್ವಯ ಎಸಿಬಿ ರದ್ದುಗೊಳಿಸಿ, ಎಸಿಬಿಯ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವಹಿಸಿದ ಬಳಿಕ ನಡೆದ ಮೊದಲ ದಾಳಿ ಇದಾಗಿದೆ.

2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಲಾಗಿತ್ತು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಹಿಂಪಡೆದು ಎಸಿಬಿಗೆ ನೀಡಲಾಗಿತ್ತು.

ಕರ್ನಾಟಕ ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಲಾಗಿತ್ತು. ರಾಜ್ಯ ಸರ್ಕಾರ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಹಿಂದೆ ನೀಡಿದ್ದ ಅಧಿಕಾರ ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿತ್ತು.

English summary
The Lokayukta police raided the Bruhat Bengaluru Mahanagara Palike (BBMP) west zone office Malleswaram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X