Lokayukta Raids BBMP Official: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು ಏಪ್ರಿಲ್ 24: ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ.
ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.

ಲೋಕಾಯುಕ್ತ ಎಸ್‌ಪಿ ಅಶೋಕ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು, ಆಸ್ತಿ, ತೆರಿಗೆ ಹಣದ ಬಗ್ಗೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್, ಇಂದುಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡದಿಂದ ಪರಿಶೀಲನೆ ಮುಂದುವರೆದಿದೆ.
Karnataka | Lokayukta raids BBMP official ADTP Gangadharaiah in Bengaluru's Yelahanka in connection with a disproportionate assets case. Cash and jewellery recovered during the raid. pic.twitter.com/y2qtXrdFVw
— ANI (@ANI) April 24, 2023
ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಪರಿಶೀಲನೆ ಮುಂದುವರೆದಿದ್ದು ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ನಗದು, ಚಿನ್ನಾಭರಣ,ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದೆ. ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಪತ್ತೆಯಾಗಿದ್ದು 80 ಲಕ್ಷ ನಗದು ಹಣ, 50 ಲಕ್ಷ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ಜೊತೆಗೆ ಕೋಲಾರದಲ್ಲಿ ಲೋಕಾಯುಕ್ತ ರೇಡ್ ನಡೆದಿದೆ. ಬಂಗಾರುಪೇಟೆ ಮುಳಬಾಗಿಲು ತಾಲೂಕು ಪಂಚಾಯಿತಿ ಇಒ ವೆಂಕಟೇಶ್ವರಪ್ಪ ಅವರಿಗೆ ಸೇರಿದ ಐದು ಕಡೆ ದಾಳಿ ಮಾಡಲಾಗಿದೆ.ಎಂಟು ವರ್ಷದಿಂದ ವೆಂಕಟೇಶ್ವರಪ್ಪ ಸೇವೆ ಸಲ್ಲಿಸುತ್ತಿದ್ದರು. ಎರಡು ದಿನದ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಇವರ ಮನೆ, ಗೋಡೋನ್, ಹಾರ್ಡ್ ವೇರ್ ಶಾಪ್, ಕೋಳಿಫಾರಂ, ಪಾರ್ಮ್ ಹೌಸ್, ಐದಕ್ಕೂ ಹೆಚ್ಚು ಖಾಲಿ ನಿವೇಶನಗಳು, ಚಿನ್ನದ ಒಡವೆಗಳು, ಸೇರಿದಂತೆ ಮನೆಯಲ್ಲಿ ಸಾವಿರಾರು ರೂಪಾಯಿ ನಗದು ಪತ್ತೆಯಾಗಿದೆ.
ಶಿವಮೊಗ್ಗ ನಗರದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವನ್ಯಜೀವಿ ವಿಭಾಗದ ನಿವೃತ್ತ ಡಿಸಿಎಫ್ ನಾಗರಾಜ್ ಮನೆಗಳ ಮೇಲೆ ರೇಡ್ ಆಗಿದೆ.
ನಾಲ್ಕೈದು ಅಧಿಕಾರಿಗಳ ತಂಡ ಬೇರೆ ಬೇರೆ ಕಡೆ ದಾಳಿ ಮಾಡಿದೆ. ಭ್ರಷ್ಟಾಚಾರದ ಆರೋಪದಲ್ಲಿ ದಾವಣಗೆರೆಯಲ್ಲೂ ಲೋಕಯುಕ್ತ ದಾಳಿ ನಡೆದಿದೆ. ಅವರ ಆದಾಯಕ್ಕಿಂತ ಹೆಚ್ಚು ಆದಾಯ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಚುನಾವಣೆ ಬೆನ್ನಲ್ಲೆ ಸಾಕಷ್ಟು ಹಣ ಕೂಡ ಇವರ ಮನೆಯಲ್ಲಿ ಇರಬಹುದು ಎನ್ನುವ ಅನುಮಾನದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.












Click it and Unblock the Notifications