ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಬ್ ರಿಜಿಸ್ಟರ್ ಕಚೇರಿಗಳ ಕರ್ಮಕಾಂಡ ಲೋಕಾಯುಕ್ತ ದಾಳಿಯಲ್ಲಿ ಬಯಲು

|
Google Oneindia Kannada News

ಬೆಂಗಳೂರು, ಜು. 19: ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಆದೇಶಿಸಿದ್ದಾರೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಪ್ರತಿ ಉಪ ನೋಂದಣಾಧಿಕಾರಿ ಕಚೇರಿವಾರಿ ಅಲ್ಲಿನ ಅವ್ಯವಸ್ಥೆಗಳ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್, ಈ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಸೆ. 6 ರೊಳಗೆ ಉಪ ನೊಂದಣಾಧಿಕಾರಿ ಕಚೇರಿಯ ಅಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ನ್ಯಾ. ಬಿ.ಎಸ್. ಪಾಟೀಲ್, ಉಪ ನೊಂದಣಾಧಿಕಾರಿಗಳ ಕಚೇರಿಗಳಲ್ಲಿನ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರು ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತ ನ್ಯಾಯಮೂರ್ತಿಗಳು ಬೆಂಗಳೂರಿನ ವಿವಿಧ ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಉಪ ನೋಂದಣಾಧಿಕಾರಿಗಳ ಕಚೇರಿಯಗಳಲ್ಲಿನ ದುರಾಡಳಿತ ಬಯಲಿಗೆ ಬಂದಿತ್ತು. ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿನ ದುರಾಡಳಿತ ಪಟ್ಟಿ ಮಾಡಿರುವ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರು, ಉಪ ಲೋಕಾಯುಕ್ತ ನ್ಯಾ. ಕೆ.ಎನ್ ಫಣೀಂದ್ರ , ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿ ಅದರಂತೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆಗೆ ಸೂಚಿಸಿದ್ದಾರೆ. ಲೋಕಾಯುಕ್ತರ ಆದೇಶದ ಮೇರೆಗೆ ಸ್ವಯಂ ಪ್ರೇರಿತ ಕೇಸಿನ ತನಿಖೆಯೂ ಶುರುವಾಗಿದೆ.

Lokayuktha registered sumo-to case against Bengaluru Sub Registrar offices corruption

ಬೆಂಗಳೂರಿನ 43 ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ದಾಳಿ:

ಬೆಂಗಳೂರು ನಗರ ಜಿಲ್ಲೆಯ 43 ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ದಾಳಿ ಮಾಡಿದ್ದು, ಅಲ್ಲಿನ ದುರಾಡಳಿತ, ಭ್ರಷ್ಟಾಚಾರದ ಬಗ್ಗೆ ಕಚೇರಿ ವಾರು ಅಂಶಗಳನ್ನು ಲೋಕಾಯುಕ್ತ ಸಂಸ್ಥೆ ಪಟ್ಟಿ ಮಾಡಿದೆ. ಬಹುತೇಕರು ಕರ್ತವ್ಯದ ವೇಳೆ ಗುರುತಿನ ಚೀಟಿ ಧರಿಸಿಲ್ಲ. ಅಧಿಕಾರಿಗಳ ಹೆಸರು, ಪದನಾಮದ ಫಲಕಗಳನ್ನು ಸಾರ್ವಜನಿಕರಿಗೆ ಪ್ರದರ್ಶನ ಮಾಡಿಲ್ಲ. ಸಿಸಿಟಿವಿ ಕ್ಯಾಮರಾಗಳು ಕೆಲಸ ನಿರ್ವಹಿಸುತ್ತಿಲ್ಲ. ಸಾರ್ವಜನಿಕರಿಂದ ಮಧ್ಯವರ್ತಿಗಳು ಹಣ ಪಡೆದು ಭ್ರಷ್ಟಾಚಾರ ಮಾಡುತ್ತಿದ್ದಾರೆ. ರಿಜಿಸ್ಟರ್ 45 ಸರಿಯಾಗಿ ನಿರ್ವಹಣೆ ಮಾಡಿಲ್ಲ. ಆಸ್ತಿ ನೋಂದಣಿ ಸಾಪ್ಟ್‌ವೇರ್ ಕಾವೇರಿ ಸರಿಯಾಗಿ ನಿರ್ವಹಿಸದೇ ಸಾರ್ವನಿಕರಿಗೆ ತೊಂದರೆ ನೀಡಲಾಗುತ್ತಿದೆ. ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ ನಗದು ಪುಸ್ತಕ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ.

Lokayuktha registered sumo-to case against Bengaluru Sub Registrar offices corruption

ಬಹುತೇಕರು ತಮ್ಮ ಬಳಿಯಿರುವ ನಗದು ಹಣ ಘೋಷಣೆ ಮಾಡಿಲ್ಲ. ಆರ್‌ಟಿಐ ಅರ್ಜಿಗಳನ್ನು ವಿಲೇವಾರಿ ಮಾಡಿದ ವಿವರಗಳು ಸರಿಯಾಗಿ ನಮೂದಿಸಿಲ್ಲ. ಡಿ ಗ್ರೂಪ್ ಸಿಬ್ಬಂದಿ ಹಾಗೂ ಹೊರ ಗುತ್ತಿಗೆ ಸಿಬ್ಬಂದಿ ಸಮವಸ್ತ್ರ ಧರಿಸಿಲ್ಲ. ಅಧಿಕಾರ ಹಸ್ತಾಂತರ ಕಾನೂನು ಬಾಹಿರವಾಗಿ ವರ್ಗಾವಣೆ. ಹಾಜರಾತಿ ಪುಸ್ತಕ ಸರಿಯಾಗಿ ನಿರ್ವಹಿಸಿಲ್ಲ. ನಗದು ಪುಸ್ತಕದಲ್ಲಿ ಸರ್ಕಾರಿ ಅಧಿಕಾರಿಗಳು ತಮ್ಮ ಬಳಿಯಿರುವ ನಗದು ಹಣ ನಮೂದಿಸಿಲ್ಲ. ಮೇಲಾಧಿಕಾರಿಗಳ ಉಸ್ತುವಾರಿ ನಡೆಯುತ್ತಿಲ್ಲ. ಕಂದಾಯ ಕಾನೂನು ಉಲ್ಲಂಘನೆ ಮಾಡಿ ಸಿಬ್ಬಂದಿ ಕೆಲಸ ನಿರ್ವಹಿಸಿಲ್ಲ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ದುರಾಡಳಿತದ ಬಗ್ಗೆ ಲೋಕಾಯುಕ್ತರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Lokayuktha registered sumo-to case against Bengaluru Sub Registrar offices corruption

ಲೋಕಾಯುಕ್ತರು ಉಲ್ಲೇಕಿಸಿರುವ ದುರಾಡಳಿತ ನಿಯಂತ್ರಣ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಇನ್‌ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್, ಜಿಲ್ಲಾ ನೋಂದಣಾಧಿಕಾರಿಗಳು, ಗಾಂಧಿನಗರ, ಜಯನಗರ, ಸೇರಿದಂತೆ 51 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಬೆಳಕಿಗೆ ಬಂದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ವಿವರ ಸಲ್ಲಿಸುವಂತೆ ಲೋಕಾಯುಕ್ತರು ಸೂಚಿಸಿದ್ದಾರೆ.

English summary
Corruption in Sub Registrar offices in Bengaluru: Lokayuktha justice BS Patil ordered to investigation. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X