ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.16ರಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ

|
Google Oneindia Kannada News

ಬೆಂಗಳೂರು, ಜ. 13 : ಬೆಂಗಳೂರು ನಗರದೊಳಗೆ ಬೆಳಗಿನ ಹೊತ್ತು ಲಾರಿಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ಲಾರಿ ಮಾಲೀಕರ ಸಂಘ ಪ್ರತಿಭಟನೆ ಆರಂಭಿಸಲಿದೆ. ಜ.16ರಿಂದ ಪ್ರತಿಭಟನೆ ಆರಂಭವಾಗಲಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಗಪ್ಪ ಅವರು, ಜವರಿ 16ರಿಂದ ಲಾರಿ ಮಾಲೀಕರು ಮುಷ್ಕರ ನಡೆಸಲು ತೀರ್ಮಾನಿಸಿದ್ದು, ಬೆಂಗಳೂರು ನಗರಕ್ಕೆ ಲಾರಿಗಳು ಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

Lorry

ಬೆಂಗಳೂರು ನಗರದಲ್ಲಿ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮೂರು ಟನ್‌ಗಿಂತ ಹೆಚ್ಚು ಭಾರದ ಸರಕು ಸಾಗಿಸುವ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಇದನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. [ಲಾರಿಗಳು ಹಗಲು ಬೆಂಗಳೂರು ಪ್ರವೇಶಿಸುವಂತಿಲ್ಲ]

ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿ ಈ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಲಾರಿ ಮಾಲೀಕರು ಮುಷ್ಕರದ ನಿರ್ಧಾರ ಕೈಗೊಂಡಿದ್ದೇವೆ ಎಂದು ಷಣ್ಮುಗಪ್ಪ ಅವರು ಹೇಳಿದರು.

ಡಿ.22ರಂದು ಆದೇಶ ಹೊರಡಿಸಿದ್ದ ಬೆಂಗಳೂರು ನಗರ ಪೊಲೀಸರು, ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮೂರು ಟನ್‌ಗಿಂತ ಹೆಚ್ಚು ಭಾರದ ಸರಕು ಸಾಗಿಸುವ ವಾಹನಗಳ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದರು. ರಾತ್ರಿ 10ರ ನಂತರ ಬೆಳಗ್ಗೆ 6 ಗಂಟೆಯೊಳಗೆ ನಗರದೊಳಗೆ ಲಾರಿಗಳು ಸಂಚರಿಸಬಹುದಾಗಿದೆ ಎಂದು ಹೇಳಿದ್ದರು.

English summary
The president of the Federation of Karnataka State Lorry Owners and Agents Association G.R.Shanmugap said, services would be suspended from January 16.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X