ದೇವೇಗೌಡ್ರ ಫೋನ್ ಕದ್ದಾಲಿಸುವ ಚಟ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು, ಮೇ 27: ಮಾಜಿ ಪ್ರಧಾನಿ ದೇವೇಗೌಡರ ದೂರವಾಣಿ ಕರೆಗಳನ್ನು ಕದ್ದಾಲಿಸುವ ಚಟ ನಮ್ಮ ಸರ್ಕಾರಕ್ಕಿಲ್ಲ. ದೇವೇಗೌಡರು ಸುಳ್ಳು ಹೇಳುವುದನ್ನು ಬಿಡಲಿ. ಲಾಟರಿ ಹಗರಣವನ್ನು ಸಿಬಿಐಗೆ ವಹಿಸಿದ್ದು ನಮ್ಮ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರ, ಇದರಿಂದ ಸತ್ಯ ಹೊರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪದೇ ಪದೇ ಸುಳ್ಳು ಹೇಳುತ್ತಾ, ಜನರ ದಿಕ್ಕು ತಪ್ಪಿಸಲು ದೇವೇಗೌಡರು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧ ಬಳಿಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾತನಾಡಿದರು. [ಬಹುಕೋಟಿ ಲಾಟರಿ ಹಗರಣದ ತನಿಖೆ ಸಿಬಿಐ ಕೈಗೆ]

CM Siddaramaiah denies allegations made by HD Deve Gowda

'ನೋಡಿ, ನಮ್ಮ ಸರ್ಕಾರ ಅವರ ದೂರವಾಣಿ ಕದ್ದಾಲಿಕೆ ಮಾಡುತ್ತಿಲ್ಲ. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ. ಈ ವಿಚಾರದಲ್ಲಿ ಕೇವಲ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದರು. ಒಂದಂಕಿ ಲಾಟರಿ ಹಗರಣವನ್ನು ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಈ ಪ್ರಕರಣ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ವಿವರ ನೀಡಿ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು. [ಪಾರಿ ರಾಜನ್ ನೀಡಿದ ಫೋನ್ ಕರೆ ವಿವರ]

ಮಾಜಿ ಪ್ರಧಾನಿಯಾದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿತ್ತು. ಆದರೆ, ಯಾವುದೇ ಸಾಕ್ಷ್ಯಾಧಾರ, ದಾಖಲೆಗಳಿಲ್ಲದೆ ಬೇಜವಾಬ್ದಾರಿಯಿಂದ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದರು. [ಲಾಟರಿ ಹಗರಣ ಸಿಬಿಐ ತನಿಖೆಗೆ ಕೊಟ್ಟಿದ್ದೇಕೆ?]

ಆಧುನಿಕ ಭಾರತ ನಿರ್ಮಾತೃ: ನೆಹರೂ ದೇಶದ ನಿರ್ಮಾತೃಗಳಲ್ಲಿ ಒಬ್ಬರು. ಆಧುನಿಕ ಭಾರತದ ಬಗ್ಗೆ ದೊಡ್ಡ ಕನಸುಗಳನ್ನು ಹೊತ್ತ ಅವರು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ, ಶಿಕ್ಷಣ ಕ್ಷೇತ್ರದ ಬೆಳವಣಿಗೆ, ಯೋಜನಾ ಆಯೋಗದಂಥ ನಾನಾ ಕೊಡುಗೆಗಳನ್ನು ದೇಶಕ್ಕೆ ನೀಡಿದ ಮಹನೀಯರು ಎಂದು ಹೊಗಳಿದರು. [ಲಾಟರಿ ಹಗರಣ ಸಿಬಿಐ ತನಿಖೆಗೆ : ಯಾರು, ಏನು ಹೇಳಿದರು?]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+