ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಪ್ರೇಮಿಗಳ ಆತ್ಮಹತ್ಯೆ
ಬೆಂಗಳೂರು, ಜುಲೈ 04 : ತಮಿಳುನಾಡು ಮೂಲದ ಪ್ರೇಮಿಗಳಿಬ್ಬರು ಬೆಂಗಳೂರು ಹೊರವಲಯದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಶ್ರೀನಿವಾಸ್ (34), ಸತ್ಯಜ್ಯೋತಿ (28) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಬುಧವಾರ ಸಂಜೆ ಬೆಂಗಳೂರು ಉತ್ತರ ತಾಲೂಕಿನ ನಗರೂರು ಬಳಿ ಇರುವ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಪ್ರೇಮಿಗಳು ರೂಂ ಪಡೆದಿದ್ದರು.
ಗುರುವಾರ ಮಧ್ಯಾಹ್ನದ ತನಕ ಇಬ್ಬರು ಹೊರಬಂದಿರಲಿಲ್ಲ. ರೆಸಾರ್ಟ್ ಸಿಬ್ಬಂದಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತರಿಬ್ಬರು ತಮಿಳುನಾಡಿನ ಧರ್ಮಪುರಿ ಮೂಲದವರು ಎಂದು ತಿಳಿದು ಬಂದಿದೆ. ಮನೆಯಲ್ಲಿ ವಿವಾಹಕ್ಕೆ ನಿರಾಕರಿಸಿದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪೊಲೀಸರು ಕುಟುಂಬದವರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.












Click it and Unblock the Notifications