ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಪ್ರೇಮಿಗಳ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಜುಲೈ 04 : ತಮಿಳುನಾಡು ಮೂಲದ ಪ್ರೇಮಿಗಳಿಬ್ಬರು ಬೆಂಗಳೂರು ಹೊರವಲಯದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀನಿವಾಸ್ (34), ಸತ್ಯಜ್ಯೋತಿ (28) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಬುಧವಾರ ಸಂಜೆ ಬೆಂಗಳೂರು ಉತ್ತರ ತಾಲೂಕಿನ ನಗರೂರು ಬಳಿ ಇರುವ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಪ್ರೇಮಿಗಳು ರೂಂ ಪಡೆದಿದ್ದರು.

ಬೆಂಗಳೂರು : 2 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಬೆಂಗಳೂರು : 2 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

ಗುರುವಾರ ಮಧ್ಯಾಹ್ನದ ತನಕ ಇಬ್ಬರು ಹೊರಬಂದಿರಲಿಲ್ಲ. ರೆಸಾರ್ಟ್‌ ಸಿಬ್ಬಂದಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೈಸೂರಿನಲ್ಲಿ ನೇಣಿಗೆ ಶರಣಾದ ವಿವಾಹಿತ ಪ್ರೇಮಿಗಳುಮೈಸೂರಿನಲ್ಲಿ ನೇಣಿಗೆ ಶರಣಾದ ವಿವಾಹಿತ ಪ್ರೇಮಿಗಳು

Lovers commits suicide at golden palm resort

ಮೃತರಿಬ್ಬರು ತಮಿಳುನಾಡಿನ ಧರ್ಮಪುರಿ ಮೂಲದವರು ಎಂದು ತಿಳಿದು ಬಂದಿದೆ. ಮನೆಯಲ್ಲಿ ವಿವಾಹಕ್ಕೆ ನಿರಾಕರಿಸಿದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕಮಂಗಳೂರಿನಲ್ಲಿ ಯುವತಿಗೆ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಪೊಲೀಸರು ಕುಟುಂಬದವರ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

English summary
Tamil Nadu based lovers committed suicide at golden palm resort Bengaluru. Shrinivas (34) and Satyajyothi (28) body found on July 4, 2019 evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X