ಬೆಂಗಳೂರಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣ ಹೆಚ್ಚಳ: ಕರೀಗೌಡ
ಬೆಂಗಳೂರು: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ ಕಂಡುಬಂದಿದ್ದು, ಪ್ರತಿನಿತ್ಯ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ ಅವರು ತಿಳಿಸಿದ್ದಾರೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಂಬಂಧಿಸಿದಂತೆ ಸೋಮವಾರ ಮಾರ್ಚ್ 02ರಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಪ್ರತಿದಿನ ಸರಾಸರಿ 6,000 ಮೆಟ್ರಿಕ್ ಟನ್ ಕಸ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF - Refuse Derived Fuel) ಸಂಗ್ರಹಿಸಲಾಗುತ್ತಿದೆ. ಈ ಪ್ರಮಾಣವನ್ನು 1,000 ಮೆಟ್ರಿಕ್ ಟನ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC) ಕಾರ್ಯಕ್ರಮಗಳ ಪರಿಣಾಮವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಇದರೊಂದಿಗೆ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF) ಸಂಗ್ರಹಣೆಯಲ್ಲಿಯೂ ಮಹತ್ತರ ಪ್ರಗತಿ ಸಾಧಿಸಲಾಗಿದೆ. ಪ್ಲಾಸ್ಟಿಕ್ ವಿಂಗಡಣೆ ಹೆಚ್ಚಿದಂತೆ ಲ್ಯಾಂಡ್‌ಫಿಲ್‌ಗೆ ಸಾಗುವ ತ್ಯಾಜ್ಯದ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ದಿಟ್ಟ ಕ್ರಮಗಳ ಫಲವಾಗಿದೆ ಎಂದು ಹೇಳಿದ್ದಾರೆ.
1. ಅಕ್ಟೋಬರ್-2025ಕ್ಕೂ ಮೊದಲು ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF) ಸಂಗ್ರಹಣೆ ಸುಮಾರು ಶೇ. 10ರಷ್ಟಿತ್ತು. ಅಕ್ಟೋಬರ್-2025ರಿಂದ ಜಾರಿಗೆ ತಂದ ಜಾಗೃತಿ ಕಾರ್ಯಕ್ರಮಗಳು ಹಾಗೂ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಸಂಗ್ರಹಣೆಯ ಪ್ರಮಾಣವು ಸುಮಾರು 50 ಪಟ್ಟು ಹೆಚ್ಚಾಗಿದೆ.
2. ಪ್ರಸ್ತುತ ಪ್ರತಿದಿನ 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF) ಸಂಗ್ರಹಿಸಲಾಗುತ್ತಿದೆ.
3. 09.10.2025ರಿಂದ 26.02.2026ರವರೆಗೆ ಒಟ್ಟು 19,470 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (RDF) ಸಂಗ್ರಹಿಸಲಾಗಿದೆ.
4. ಸಂಗ್ರಹಿಸಲಾದ RDF ತ್ಯಾಜ್ಯವನ್ನು ಟೆಂಡರ್ ಒಪ್ಪಂದದಡಿ ಸಿಮೆಂಟ್ ಘಟಕಗಳಿಗೆ ಸಹ-ಸಂಸ್ಕರಣೆಯ (Co-processing) ಮೂಲಕ ವಿಲೇವಾರಿ ಮಾಡಲು ಸಾಗಿಸಲಾಗುತ್ತಿದೆ. 15.12.2025ರಿಂದ 26.02.2026ರವರೆಗೆ ಒಟ್ಟು 18,625 ಮೆಟ್ರಿಕ್ ಟನ್ RDF ತ್ಯಾಜ್ಯವನ್ನು ದಾಲ್ಮಿಯಾ ಸಿಮೆಂಟ್ಸ್ ಘಟಕಕ್ಕೆ ರವಾನಿಸಲಾಗಿದೆ.
5. ಈ ಪ್ರಕ್ರಿಯೆಯಡಿ ಸಿಮೆಂಟ್ ಕಂಪನಿಗಳು ವಿಸ್ತೃತ ಉತ್ಪಾದಕರ ಜವಾಬ್ದಾರಿ (EPR - Extended Producer Responsibility) ಕ್ರೆಡಿಟ್‌ಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ನೀಡುತ್ತವೆ. ಇವುಗಳ ವಹಿವಾಟು ಸಂಸ್ಥೆಗೆ ಆರ್ಥಿಕ ಬಲವರ್ಧನೆಯನ್ನು ನೀಡುತ್ತಿದ್ದು, ಸುಸ್ಥಿರ ಘನತ್ಯಾಜ್ಯ ನಿರ್ವಹಣೆಗೆ ನೆರವಾಗುತ್ತಿದೆ.
6. ಡಿಸೆಂಬರ್-2025ರಿಂದ ಜನವರಿ-2026ರವರೆಗೆ 3,600 ಇಪಿಆರ್ ಕ್ರೆಡಿಟ್‌ಗಳನ್ನು ಉತ್ಪಾದಕರು, ಆಮದುದಾರರು ಹಾಗೂ ಬ್ರ್ಯಾಂಡ್ ಮಾಲೀಕರು (PIBOs) ಅವರಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2024ರ ಅನ್ವಯ ಮಾರಾಟ ಮಾಡುವ ಮೂಲಕ ಕನಿಷ್ಠ ರೂ. 54.00 ಲಕ್ಷದಿಂದ ಗರಿಷ್ಠ ರೂ. 1.80 ಕೋಟಿ ವರೆಗೆ ಆದಾಯ ಲಭ್ಯವಾಗುವ ಸಾಧ್ಯತೆ ಇದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯನ್ನು ಇನ್ನಷ್ಟು ಸುಸ್ಥಿರಗೊಳಿಸಲಾಗುತ್ತದೆ.
ಸ್ವಚ್ಛ ಸರ್ವೇಕ್ಷಣ್‌ಗಾಗಿ ರಾಯಭಾರಿಗಳ ನೇಮಕ
ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ, ಚಲನಚಿತ್ರ ನಟ ಅನಿರುದ್ಧ ಜಟ್ಕರ್ ಹಾಗೂ ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ಅವರನ್ನು ರಾಯಭಾರಿಗಳಾಗಿ ನೇಮಿಸಲಾಗುತ್ತಿದೆ. ಈ ಸಂಬಂಧ ಟೌನ್ ಹಾಲ್‌ನಲ್ಲಿ ಮಾರ್ಚ್ 9ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಭಾರಿಗಳ ಮೂಲಕ ನಗರದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ದಂಡದ ಹಣದಿಂದ ಟ್ರ್ಯಾಕ್ಟರ್ ಖರೀದಿ:
ಜಿಬಿಎ ವ್ಯಾಪ್ತಿಯಲ್ಲಿ ರಸ್ತೆಬದಿ ಕಸ ಬಿಸಾಡುವ ಹಾಗೂ ಕಸ ವಿಂಗಡಿಸದೆ ನೀಡುವವರಿಂದ ಪ್ರತಿ ತಿಂಗಳು ಸರಾಸರಿ 60 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗುತ್ತಿದೆ. ಈ ದಂಡದ ಹಣದಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಟ್ರ್ಯಾಕ್ಟರ್ ಖರೀದಿಸಲಾಗಿದೆ. ಟ್ರ್ಯಾಕ್ಟರ್‌ಗಳ ಮೂಲಕ ಬಲ್ಕ್ ವೇಸ್ಟ್ ತೆರವುಗೊಳಿಸಲಾಗುತ್ತಿದ್ದು, ಕಳೆದ ಮೂರು ತಿಂಗಳ ಅವಧಿಯಲ್ಲಿ 6,000 ಮೆಟ್ರಿಕ್ ಟನ್‌ಕ್ಕಿಂತ ಹೆಚ್ಚು ಬಲ್ಕ್ ವೇಸ್ಟ್ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಜಾಗ ಗುರುತು
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಳ ಹೋಬಳಿಯ ಗುಂಡಲಹಳ್ಳಿ ಗ್ರಾಮದ ಟೆರ್ರಾ ಫಾರ್ಮ್ ಪ್ರದೇಶ ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಸರ್ಕಾರಿ ಜಾಗ ಸೇರಿದಂತೆ ಸಮಗ್ರ ಘನತ್ಯಾಜ್ಯ ನಿರ್ವಹಣಾ ಯೋಜನೆಗಾಗಿ ಎರಡೂ ಕಡೆ 100 ಎಕರೆಗೂ ಹೆಚ್ಚು ಜಾಗವನ್ನು ಗುರುತಿಸಲಾಗಿದೆ. ಸರ್ಕಾರ ನಿಗದಿಪಡಿಸಿರುವ ಭೂಪರಿಹಾರವನ್ನು ನೀಡಿದ ಬಳಿಕ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರದಲ್ಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.
ಕಸದ ಸಮಸ್ಯೆ ಇದ್ದರೆ ದೂರು ನೀಡಿ
ಜಿಬಿಎ ವ್ಯಾಪ್ತಿಯ ಯಾವುದೇ ಪ್ರದೇಶದಲ್ಲಿ ಕಸದ ಸಮಸ್ಯೆ ಇದ್ದರೆ, ಸಹಾಯ 2.0 ತಂತ್ರಾಂಶ, ಜಿಬಿಎ ಸಹಾಯವಾಣಿ ಸಂಖ್ಯೆ 1533 ಅಥವಾ ವಾಟ್ಸಪ್ ಚಾಟ್ ಬಾಟ್ ಸಂಖ್ಯೆ 94481 97197 ಗೆ ಸಂದೇಶ ಕಳುಹಿಸಬಹುದು. ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ಮೂಲಕ ದೂರುಗಳನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಹಾಗೂ ಸಮಸ್ಯೆ ಶೀಘ್ರ ಪರಿಹರಿಸಲಾಗುತ್ತದೆ ಎಂದು ಹೇಳಿದ್ದಾರೆ.
-
Greater Bengaluru Authority: ಅಪಾಯಕಾರಿ ಮರ-ಕೊಂಬೆಗಳ ತೆರವು ಚುರುಕು – ಸಾರ್ವಜನಿಕ ಸುರಕ್ಷತೆಗೆ ಆದ್ಯತೆ -
Bengaluru Karaga: ಬೆಂಗಳೂರು ಕರಗ ಮಹೋತ್ಸವ ಅವಧಿಯಲ್ಲಿ 12 ದಿನಗಳಲ್ಲಿ 455 ಟನ್ ತ್ಯಾಜ್ಯ ವಿಲೇವಾರಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications