SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ: ಪುರುಷೋತ್ತಮ ಬಿಳಿಮಲೆ
ಬೆಂಗಳೂರು, ನವೆಂಬರ್ 07: SSLC ಮತ್ತು PUC ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು 33ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೇಮಿಸಲಾಗಿರುವ ಕನ್ನಡ ಜಾಗೃತಿ ಸಮಿತಿ ಸದಸ್ಯರ ಕಮ್ಮಟದ ಅಧ್ಯಕ್ಷತೆಯನ್ನು ವಹಿಸಿ ಶುಕ್ರವಾರ ಮಾತನಾಡಿದರು. ಕೇಂದ್ರ ಪಠ್ಯಕ್ರಮದ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಮಾನ ಭೂಮಿಕೆಯನ್ನು ಹೊಂದಬೇಕೆನ್ನುವ ಪ್ರಮುಖ ಕಾರಣಕ್ಕೆ ಸರ್ಕಾರವು ತೆಗೆದುಕೊಂಡಿರುವ ನಿರ್ಧಾರ ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆಗೆ ಮಾರಕವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಭಾಷಾ ಕಲಿಕೆಗೆ ಅವಶ್ಯಕವಿರುವ ಗಂಭೀರತೆಯನ್ನು ಈ ತೀರ್ಮಾನವು ಕಸಿದುಕೊಳ್ಳಲಿದೆ. ಭವಿಷ್ಯದಲ್ಲಿ ಸರ್ಕಾರದ ಈ ನಿರ್ಧಾರ ಶಿಕ್ಷಣದಲ್ಲಿ ಕನ್ನಡ ಕಲಿಕೆಗೆ ಪ್ರತಿಕೂಲವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದು ಪುರುಷೋತ್ತಮ ಬಿಳಿಮಲೆ ಅವರು ಕರೆ ನೀಡಿದರು.
GBA ಮಾದರಿಯಲ್ಲಿ 'ಗ್ರೇಟರ್ ತುಮಕೂರು ಪ್ರಾಧಿಕಾರ': ಜಿಲ್ಲೆಗೆ ಸಿಹಿಸುದ್ದಿ ಕೊಟ್ಟ ಜಿ.ಪರಮೇಶ್ವರ
ಈ ಶತಮಾನವು ಅಪೇಕ್ಷಿಸುತ್ತಿರುವ ಕೌಶಲ್ಯವನ್ನು ಪಡೆಯುವಲ್ಲಿ ನಮ್ಮ ವಿದ್ಯಾರ್ಥಿಗಳು ಈಗಾಗಲೇ ಹಿಂದಿದ್ದಾರೆ. ಸರ್ಕಾರದ ಇಂತಹ ತೀರ್ಮಾನಗಳು ಕೌಶಲ್ಯಯುಕ್ತ ಸಮಾಜವನ್ನು ನಿರ್ಮಿಸುವಲ್ಲಿ ನಕಾರಾತ್ಮಕವಾದ ಪ್ರಭಾವವನ್ನು ಬೀರುತ್ತವೆ50 ವರ್ಷ ಹಿಂದಿರುವ ನಮ್ಮ ಬೋಧನ ಕ್ರಮ ಆಧುನಿಕ ಕಾಲಘಟ್ಟಕ್ಕೆ ಸಂವಾದಿಯಾಗಬೇಕಾದ ತುರ್ತು ಅಗತ್ಯವಿದೆ ಎಂದರು.
ರಾಜ್ಯ ಶಿಕ್ಷಣ ನೀತಿ ಸಾರ್ವಜನಿಕ ಚರ್ಚೆ ಆಗಲಿ
ನಾಡಿನ ಅತ್ಯುತ್ತಮ ಶಿಕ್ಷಣ ತಜ್ಞರುಗಳನ್ನೊಳಗೊಂಡ ಸಮಿತಿಯು ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರಕ್ಕೆ ಸಲ್ಲಿಸಿ ಆರು ತಿಂಗಳು ಕಳೆದರೂ ಇದನ್ನು ಸರ್ಕಾರವು ಸಾರ್ವಜನಿಕ ಚರ್ಚೆಗೆ ಒಳಪಡಿಸಿಲ್ಲ. ಇದು ಖಂಡನೀಯ. ಅತ್ಯಾಧುನಿಕವಾದ ಬೋಧನಾ ಕ್ರಮಗಳನ್ನು ವಿಷದಪಡಿಸಿರುವ ರಾಜ್ಯ ಶಿಕ್ಷಣ ನೀತಿಯನ್ನು ಕೂಡಲೇ ಸರ್ಕಾರವು ಅಳವಡಿಸಿಕೊಳ್ಳುವ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ವೃದ್ಧಿಸುವ ಕೆಲಸ ಮಾಡಿದರೆ ಮಾತ್ರ ಕನ್ನಡಿಗರು ಜಾಗತಿಕ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದ ಅವರು, ರಾಜ್ಯ ಶಿಕ್ಷಣ ನೀತಿಯು ಈ ಎಲ್ಲ ಸವಾಲುಗಳಿಗೆ ಉತ್ತರವಾಗಿದ್ದು, ಇದನ್ನು ಆದಷ್ಟು ಶೀಘ್ರ ಸರ್ಕಾರವು ಪರಿಗಣಿಸುವ ವಾತಾವರಣವನ್ನು ಸೃಷ್ಠಿಸಬೇಕಿದೆ ಎಂದು ತಿಳಿಸಿದರು.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications