ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ?

|
Google Oneindia Kannada News

Recommended Video

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ?

ಬೆಂಗಳೂರು, ಮಾರ್ಚ್ 22: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿ ಹಬ್ಬಿದ್ದು, ಮಾಧ್ಯಮಗಳೂ ಈ ಕುರಿತು ಸುದ್ದಿ ಮಾಡುತ್ತಿವೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಈಗಾಗಲೇ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನರೇಂದ್ರ ಮೋದಿ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಅದರೊಟ್ಟಿಗೆ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು ಈ ವದಂತಿ ಎಷ್ಟರಮಟ್ಟಿಗೆ ನಿಖರವಾದ್ದು ಎಂಬುದು ತಿಳಿಯಬೇಕಿದೆ. ಬಿಜೆಪಿ ವಲಯದಿಂದಲೂ ಈ ಕುರಿತು ಯಾವುದೇ ಪ್ರತಿಕ್ರಿಯೆ ಇದುವರೆಗೆ ಲಭ್ಯವಾಗಿಲ್ಲ.

ವಾರಣಾಸಿ ತೊರೆದು ಪುರಿಯತ್ತ ಹೊರಟರೇ ಮೋದಿ? ಕಾರಣವೇನು?ವಾರಣಾಸಿ ತೊರೆದು ಪುರಿಯತ್ತ ಹೊರಟರೇ ಮೋದಿ? ಕಾರಣವೇನು?

ಕಳೆದ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ವಡೋದರ ಮತ್ತು ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಿ ಮೋದಿ ಗೆದ್ದಿದ್ದರು. ದಕ್ಷಿಣ ಬಾರತದಲ್ಲಿ ಮೋದಿಯವರ ಜನಪ್ರಿಯತೆ ಉತ್ತರ ಭಾರತಕ್ಕೆ ಹೋಲಿಸಿದರೆ ಕೊಂಚ ಕಡಿಮೆಯೇ ಎಂಬ ಕಾರಣಕ್ಕೆ ಅವರನ್ನು ದಕ್ಷಿಣ ಭಾರತದ ಯಾವುದಾದರೂ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿತ್ತು.

LS polls: Media reports say, PM Modi will contest from Bangalore south

ಗುರುವಾರ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿರಲಿಲ್ಲ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ, ಕೇಂದ್ರ ಸಚಿವವರೂ ಆಗಿದ್ದ ಅನಂತ್ ಕುಮಾರ್ ಅವರ ನಿಧನದ ನಂತರ ಈ ಕ್ಷೇತ್ರದಿಂದ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ.

English summary
Some Media reports say, Prime minister Narendra Modi will contest from Bangalore south(Bengaluru) constituency as BJP candidate, which was represented by late Ananth Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X