ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಳ್ಳು ಹೇಳುವುದು ಕಾಂಗ್ರೆಸ್ ಅಜೆಂಡಾ: ಪ್ರಹ್ಲಾದ್ ಜೋಶಿ

|
Google Oneindia Kannada News

ಬೆಂಗಳೂರು, ಜುಲೈ, 20: "ಸಂಸತ್‌ನಲ್ಲಿ ಚರ್ಚೆ ನಡೆಯದಂತೆ ಅಡ್ಡಿಪಡಿಸುವುದು, ನಂತರ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್‌ ಪಕ್ಷದ ಅಜೆಂಡಾ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

ರಾಜ್ಯಸಭೆ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಟ್ಟಿಲ್ಲ. ಆಹಾರ ಪದಾರ್ಥಗಳ ಮೇಲಿನ ಜಿಎಸ್‌ಟಿ ದರ ಹೆಚ್ಚಳ ಮಾಡಿರುವುದು ಒಮ್ಮತದ ನಿರ್ಧಾರವಲ್ಲ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಇದು ಸರ್ವಸಮ್ಮತದ ನಿರ್ಧಾರವಲ್ಲ. ಕೇಂದ್ರ ಹಣಕಾಸು ಸಚಿವರು ರಾಜ್ಯಗಳ ಹಣಕಾಸು ಸಚಿವರ ಜೊತೆ ಚರ್ಚೆ ನಡೆಸಿಲ್ಲ ಎಂದು ಟ್ವೀಟ್‌ ಮೂಲಕ ಕೇಂದ್ರ ಮಾಜಿ ಸಚಿವ ಜೈರಾಂ ರಮೇಶ್ ಬಿಜೆಪಿ ವಿರುದ್ಧ ಹರಿಹಾಯ್ದರು.

ಜೈರಾಮ್‌ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್‌ ಜೋಶಿ ಚರ್ಚೆಗೆ ನಾವು ಸಿದ್ದರಾಗಿದ್ದೇವೆ. ಪ್ರತಿಪಕ್ಷಗಳು ಸಭಾಧ್ಯಕ್ಷರಿಗೆ ನೋಟಿಸ್ ಕೊಟ್ಟು ಚರ್ಚೆಗೆ ಅವಕಾಶ ಕೊಡುವಂತೆ ಕೋರಿಕೊಳ್ಳಬೇಕು. ಆ ಬಳಿಕ ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆಯಾಗಿ ಸಮಯ ನಿಗದಿಯಾಗಬೇಕು. ಆದರೆ, ಕಾಂಗ್ರೆಸ್‌ಗೆ ಚರ್ಚಿಸುವುದು ಬೇಕಿಲ್ಲ, ಸದನದೊಳಗೆ ಕಲಾಪಕ್ಕೆ ಅಡ್ಡಿಪಡಿಸುವುದು, ಸದನದ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್ ಕೆಲಸ ಎಂದು ಆಕ್ರೋಶ ಹೊರಹಾಕಿದ್ದಾರೆ.

Lying or misguiding people is the habit of congress party says Pralhad Joshi

ಪ್ರತಿಯೊಬ್ಬ ಸಂಸದರಿಗೂ ಪ್ರಶ್ನೋತ್ತರ ಅವಧಿ ಬಹಳ ಮುಖ್ಯ. ಆದರೆ ಪ್ರಶ್ನೋತ್ತರ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳದೆ ಕಲಾಪಕ್ಕೆ ಅಡ್ಡಿ ಮಾಡುತ್ತಾರೆ ಎಂದು ಪ್ರಹ್ಲಾದ್‌ ಜೋಶಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆಹಾರ ಪದಾರ್ಥಗಳ ಮೇಲಿನ ಜಿಎಸ್‌ಟಿ ದರಗಳ ಕುರಿತು ಮುಕ್ತ ಮನಸ್ಸಿನಿಂದ ಚರ್ಚಿಸಲು ನಾವು ತಯಾರಿದ್ದೇವೆ. ಆದರೆ ಕೇಂದ್ರ ವಿತ್ತ ಸಚಿವೆ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಂಡ ತಕ್ಷಣ ಉತ್ತರಿಸುತ್ತಾರೆ. ಇಂದು ರಾಜ್ಯಸಭೆಯ ಗೌರವಾನ್ವಿತ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡೋದಾಗಿ ಹೇಳಿದರು‌‌. ಜೈರಾಮ್‌ ರಮೇಶ್ ಅವರಿಗೆ ಸದನದ ಪದ್ಧತಿ ಗೊತ್ತಿಲ್ಲವೇ? ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ‌.

Lying or misguiding people is the habit of congress party says Pralhad Joshi

ಕಾಂಗ್ರೆಸ್ ಪಕ್ಷದವರು ವಾಸ್ತವವನ್ನು ಎದುರಿಸಲು ಸಾಧ್ಯವಾಗದ ಕಾರಣ ಸರ್ಕಾರದ ಉದ್ದೇಶದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಕಲಾಪಕ್ಕೆ ಅಡ್ಡಿಪಡಿಸುವುದು ಮತ್ತು ಪ್ರಪಂಚದ ಮುಂದೆ ಸುಳ್ಳು ಹೇಳುವುದು ಇದು ಕಾಂಗ್ರೆಸ್ ನೀತಿ ಎಂದು ತಿರುಗೇಟು ನೀಡಿದ್ದಾರೆ. ಪ್ರಪಂಚದ ಬೇರೆ ಬೇರೆ ರಾಷ್ಟ್ರಗಳಲ್ಲಿ ಹಣದುಬ್ಬರ ಎಲ್ಲಿಗೆ ತಲುಪಿದೆ ಎನ್ನುವುದು ಕಾಂಗ್ರೆಸ್‌ಗೂ ಗೊತ್ತಿದೆ. ಭಾರತದ ಹಣದುಬ್ಬರವನ್ನು ತಡೆಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಹೀಗಾಗಿ ಸದನದಲ್ಲಿ ಕಾಂಗ್ರೆಸ್ ಚರ್ಚಿಸಲು ತಯಾರಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

English summary
Union Parliamentary Affairs Minister Pralhad Joshi said, "Congress party's agenda is to disrupt the debate in Parliament and then come out and lie, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X