ಭಾನುವಾರ ಬೆಂಗಳೂರಿನಲ್ಲಿ ಡಾ. ಎಂ ಚಿದಾನಂದಮೂರ್ತಿ ಅಂತ್ಯಕ್ರಿಯೆ
ಬೆಂಗಳೂರು, ಜನವರಿ 11: ಶನಿವಾರ ಬೆಳಿಗ್ಗೆ ನಿಧನರಾದ ಹಿರಿಯ ಸಾಹಿತಿ ಡಾ. ಎಂ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ ಜನವರಿ 12 ರಂದು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಚಿದಾನಂದಮೂರ್ತಿ ಅವರ ಕೊನೆ ಆಸೆಯಂತೆ ಅವರ ದೇಹವನ್ನು ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ. ವಿಜಯನಗರದ ಹಂಪಿನಗರದ 3 ನೇ ಕ್ರಾಸ್ನ ಚಿದಾನಂದಮೂರ್ತಿ ಅವರ ಮನೆಯಲ್ಲಿ ಶನಿವಾರ ಬೆಳಿಗ್ಗೆ 9 ರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ರಾಜಕೀಯ ಮುಖಂಡರು, ಸಾಹಿತಿಗಳು, ಗಣ್ಯರು ಹಾಗೂ ಅವರ ವಿದ್ಯಾರ್ಥಿಗಳು ಅಪಾರ ಪ್ರಮಾಣದಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು.
ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಅವರು ತಮ್ಮ ತಮ್ಮ 88 ನೇ ವಯಸ್ಸಿನಲ್ಲಿ ಶನಿವಾರ ನಸುಕಿನ ವೇಳೆ 4 ಕ್ಕೆ ನಿಧನರಾದರು. ಮಗ ವಿನಯಕುಮಾರ್ ಹಾಗೂ ಮಗಳು ಶೋಭಾ ಅವರನ್ನು ಚಿದಾನಂದಮೂರ್ತಿ ಅಗಲಿದ್ದಾರೆ.

ಮೂಲತಃ ದಾವಣಗೆರೆ ಜಿಲ್ಲೆಯವರಾದ ಚಿದಾನಂದಮೂರ್ತಿಯವರು ಮೇ 10, 1931 ರಲ್ಲಿ ಜನಿಸಿದ್ದರು. ಕನ್ನಡದ ಲೇಖಕ, ವಿದ್ವಾಂಸ, ಸಂಶೋದಕ ಹಾಗು ಇತಿಹಾಸತಜ್ಞರಾಗಿ ಜನಮಾನಸರಾಗಿದ್ದರು. ಇವರು ಹಂಪಿಯ ಸ್ಮಾರಕಗಳನ್ನು ಉಳಿಸಲು ಹಾಗು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಗಳಿಸಲು ಮಾಡಿದ್ದ ಚಳವಳಿಗೆ ಪ್ರಸಿದ್ಧರಾಗಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications