ಹೋರಾಟದಿಂದಲೇ ಕರವೇ ಯುವಜನರನ್ನು ಸಂಘಟಿಸಿದೆ: ಚನ್ನಯ್ಯ ಶ್ರೀ
ಬೆಂಗಳೂರು ಜೂ. 20: ಕನ್ನಡ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯು ಕನ್ನಡಪರ ಕಾರ್ಯಗಳಿಂದಲೇ ಯುವಮೂಹವನ್ನು ಸಂಘಟಿಸಿದೆ. ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ನಾಡು-ನುಡಿಯ ಸೇವೆ, ಚಳವಳಿಯಿಂದಲೇ ಗುರುತಿಸಿಕೊಂಡಿದ್ದಾರೆ ಎಂದು ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ಶುಕ್ರವಾರ ನಗರದ ಗಾಂಧಿಭವನದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ 55ನೇ ಜನ್ಮದಿನ ಪ್ರಯುಕ್ತ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಟಿ.ಎ. ನಾರಾಯಣಗೌಡರಲ್ಲಿ ಇರುವ ಕನ್ನಡ ನಾಡು- ನುಡಿ ಕುರಿತಾದ ಬದ್ಧತೆ ಅಪಾರ. ಕನ್ನಡದ ಯುವಕರನ್ನು ಸೂಜಿಗಲ್ಲಿನಂತೆ ಸೆಳೆಯುವ ಶಕ್ತಿ ಅವರಿಗಿದೆ. ಕನ್ನಡ ಅಸ್ಮಿತೆಗೆ ಧಕ್ಕೆ ಉಂಟಾದರೆ ರಾಜಿರಹಿತ ಹೋರಾಟ ಮಾಡಿಕೊಂಡು ಬಂದಿರುವ ಅವರು ಆ ಗುಣದಿಂದಲೇ ಕರವೇ ಸಂಘಟನೆ ಇಂದು ಬೃಹದಾಕಾರವಾಗಿ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.

ಒಳಿತಿಗಾಗಿ ಸಂಘ-ಸಂಸ್ಥೆ ಸ್ಥಾಪನೆ: ಶ್ರೀಗಳ ಶ್ಲಾಘನೆ
ಕರ್ನಾಟಕದ ಅಭ್ಯುದಯದಲ್ಲಿ ಚಳವಳಿಗಳ ಪಾತ್ರ ಬಹಳ ಪ್ರಮುಖವಾದದು. ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಮತ್ತವರ ಒಡನಾಡಿಗಳು ರೈತ ಸಂಘವನ್ನು ಕಟ್ಟಿ, ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಹೋರಾಟ ಮಾಡಿದವರು. ದಲಿತ ಸಂಘರ್ಷ ಸಮಿತಿ ಸ್ಥಾಪಿಸಿದ ಬಿ.ಕೃಷ್ಣಪ್ಪನವರು ದಲಿತರಿಗೆ ಘನತೆಯ ಬದುಕು ತಂದು ಕೊಡುವಲ್ಲಿ ಅಪಾವಾಗಿ ಶ್ರಮಿಸಿದವರು. ಅದೇ ರೀತಿ ಇಂದು ಕರವೇ ಮೂಲಕ ಕನ್ನಡಿಗರಿಗೆ, ಕನ್ನಡಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಿರುವವರ ಪೈಕಿ ನಾರಾಯಣಗೌಡರು ಒಬ್ಬರು ಎಂದು ಶ್ಲಾಘಿಸಿದರು.
ಈ ವೇಳೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ಜನ್ಮದಿನದ ಪ್ರಯುಕ್ತ ಈ ಬಾರಿ ನೂರಾರು ಕಾರ್ಯಕರ್ತರು ಕಿದ್ವಾಯಿ ಆಸ್ಪತ್ರೆ ರಕ್ತನಿಧಿಗೆ ರಕ್ತ ನೀಡುತ್ತಿದ್ದಾರೆ. ನೀವು ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿದರೆ ಅಲ್ಲಿ ಸಾವಿರಾರು ಕ್ಯಾನ್ಸರ್ ರೋಗಿಗಳನ್ನು ನೋಡಿದರೆ ಬದುಕು ಇಷ್ಟೇನಾ ಎಂದು ಅನ್ನಿಸದಿರದು. ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಬಡವರು. ಅಂಥ ರೋಗಿಗಳಿಗೆ ಅನುಕೂಲ ಮಾಡಿಕೊಡಲು ಕಿದ್ವಾಯಿ ಆಸ್ಪತ್ರೆಗೆ ರಕ್ತ ನೀಡುತ್ತಿದ್ದೇವೆ ಎಂದು ಇಂದಿನ ಕಾರ್ಯಕ್ರಮ ಕುರಿತು ಅವರು ವಿವರಿಸಿದರು.
ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರ ಸೇರಿದಂತೆ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಕರವೇ ಕಾರ್ಯಕರ್ತರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬನವಾಸಿ ಬಳಗದ ಮುಖಂಡ ಗಣೇಶ್ ಚೇತನ್, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪ್ರಕಾಶ್ ಮೂರ್ತಿ, ಕರವೇ ರಾಜ್ಯ ಉಪಾಧ್ಯಕ್ಷರಾದ ದಾ.ಪಿ.ಆಂಜನಪ್ಪ, ಬಿ.ಎಚ್.ಸತೀಶ್ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಬಸವರಾಜ ಪಡುಕೋಟಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಮತ್ತಿತರರು ಉಪಸ್ಥಿತರಿದ್ದರು.
(ಒನ್ಇಂಡಿಯಾ ಸುದ್ದಿ)
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications