ಮಡಿವಾಳ ಜಾತಿ ಎಸ್‌ಸಿಗೆ ಸೇರ್ಪಡೆಗೆ ಚಿಂತನೆ: ಸಿಎಂ
ಬೆಂಗಳೂರು, ಫೆಬ್ರವರಿ 02: ಮಡಿವಾಳ ಸಮಾಜದ ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಜಾತಿಗೆ ಸೇರ್ಪಡೆ ಈಡೇರುವ ಸಾಧ್ಯತೆ ದಟ್ಟವಾಗಿದೆ.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನಾಡಿದ್ದು ಮಡಿವಾಳ ಜನಾಂಗವನ್ನು ಎಸ್‌ಸಿಗೆ ಸೇರ್ಪಡಿಸುವುದಕ್ಕೆ ಚಿಂತಿಸಲಾಗುತ್ತದೆ ಎಂದಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದ ಸಿದ್ದರಾಮಯ್ಯ, ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

'ದೇಶದ 17 ರಾಜ್ಯಗಳಲ್ಲಿ ಮಡಿವಾಳರು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಚುನಾವಣೆ ಸಂದರ್ಭದಲ್ಲಿ ಇನ್ನೂ ಹಲವು ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಬೇಡಿಕೆ ಇಟ್ಟಿದ್ದಾರೆ. ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡುವ ಬದಲಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದರು.
ಮಡಿವಾಳರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ತೆರೆಯುವ ಬಗ್ಗೆಯೂ ಸರ್ಕಾರ ಸಕಾರಾತ್ಮಕ ಚಿಂತಿಸಿದೆ. ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಮಡಿವಾಳ ಸಮಾಜಕ್ಕೆ ಟಿಕೆಟ್ ನೀಡಬೇಕು ಎಂಬ ಇಚ್ಛೆಯೂ ಇದೆ ಎಂದ ಅವರು ಆದರೆ, ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿ ಯಾರಿದ್ದಾರೆ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಸಭಿಕರು 'ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರ' ಎಂದು ಕೂಗಿದಾಗ. 'ಅಲ್ಲಿ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎಂಬ ಮಾಹಿತಿ ಇದೆ. ನೀವು ಹೇಳಿದ್ದರಿಂದ ಮತ್ತೊಮ್ಮೆ ಸಮಿಕ್ಷೆ ನಡೆಸಿ ವಿವರ ಪಡೆದುಕೊಳ್ಳುತ್ತೇನೆ' ಎಂದು ಭರವಸೆ ನೀಡಿದರು.
ಮಡಿವಾಳ ಜನಾಂಗವನ್ನು ಎಸ್‌ಸಿಗೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೊರಾಟ ನಡೆಸಿದ್ದ ಜನಾಂಗದ ಹೋರಾಟಗಾರರಿಗೆ ಮುಖ್ಯಮಂತ್ರಿಗಳ ಮಾತು ಸಂತಸ ತಂದಿದೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications