ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿವಾಳ ಜಾತಿ ಎಸ್‌ಸಿಗೆ ಸೇರ್ಪಡೆಗೆ ಚಿಂತನೆ: ಸಿಎಂ

By Manjunatha
|
Google Oneindia Kannada News

ಬೆಂಗಳೂರು, ಫೆಬ್ರವರಿ 02: ಮಡಿವಾಳ ಸಮಾಜದ ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಜಾತಿಗೆ ಸೇರ್ಪಡೆ ಈಡೇರುವ ಸಾಧ್ಯತೆ ದಟ್ಟವಾಗಿದೆ.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನಾಡಿದ್ದು ಮಡಿವಾಳ ಜನಾಂಗವನ್ನು ಎಸ್‌ಸಿಗೆ ಸೇರ್ಪಡಿಸುವುದಕ್ಕೆ ಚಿಂತಿಸಲಾಗುತ್ತದೆ ಎಂದಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದ ಸಿದ್ದರಾಮಯ್ಯ, ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

Madivala caste to join schedule caste group

'ದೇಶದ 17 ರಾಜ್ಯಗಳಲ್ಲಿ ಮಡಿವಾಳರು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಚುನಾವಣೆ ಸಂದರ್ಭದಲ್ಲಿ ಇನ್ನೂ ಹಲವು ಸಮುದಾಯಗಳು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಬೇಡಿಕೆ ಇಟ್ಟಿದ್ದಾರೆ. ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡುವ ಬದಲಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದರು.

ಮಡಿವಾಳರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ತೆರೆಯುವ ಬಗ್ಗೆಯೂ ಸರ್ಕಾರ ಸಕಾರಾತ್ಮಕ ಚಿಂತಿಸಿದೆ. ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಮಡಿವಾಳ ಸಮಾಜಕ್ಕೆ ಟಿಕೆಟ್ ನೀಡಬೇಕು ಎಂಬ ಇಚ್ಛೆಯೂ ಇದೆ ಎಂದ ಅವರು ಆದರೆ, ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿ ಯಾರಿದ್ದಾರೆ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಸಭಿಕರು 'ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರ' ಎಂದು ಕೂಗಿದಾಗ. 'ಅಲ್ಲಿ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎಂಬ ಮಾಹಿತಿ ಇದೆ. ನೀವು ಹೇಳಿದ್ದರಿಂದ ಮತ್ತೊಮ್ಮೆ ಸಮಿಕ್ಷೆ ನಡೆಸಿ ವಿವರ ಪಡೆದುಕೊಳ್ಳುತ್ತೇನೆ' ಎಂದು ಭರವಸೆ ನೀಡಿದರು.

ಮಡಿವಾಳ ಜನಾಂಗವನ್ನು ಎಸ್‌ಸಿಗೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೊರಾಟ ನಡೆಸಿದ್ದ ಜನಾಂಗದ ಹೋರಾಟಗಾರರಿಗೆ ಮುಖ್ಯಮಂತ್ರಿಗಳ ಮಾತು ಸಂತಸ ತಂದಿದೆ.

English summary
Madivala caste join schedule caste group soon says CM Siddaramaiah. He said soon state government will recommend the same to central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X