Vande Bharat Express: ಬೆಂಗಳೂರು-ಮಧುರೈ ವಂದೇ ಭಾರತ್ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು, ಸೆಪ್ಟೆಂಬರ್ 04: ಭಾರತೀಯ ರೈಲ್ವೆ ಬೆಂಗಳೂರು-ಮಧುರೈ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಆಗಸ್ಟ್ 31ರಂದು ಪ್ರಧಾನಿ ನರೇಂದ್ರ ಮೋದಿ ಈ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದರು. ತಮಿಳುನಾಡಿನ ಮಧುರೈ ಮತ್ತು ಕರ್ನಾಟಕದ ರಾಜಧಾನಿ ಬೆಂಗಳೂರು ನಡುವೆ ಈ ರೈಲು ಸಂಚಾರವನ್ನು ನಡೆಸುತ್ತದೆ.

ನೈಋತ್ಯ ರೈಲ್ವೆ ವಂದೇ ಭಾರತ್ ಎಕ್ಸ್‌ಪ್ರೆಸ್ ವೇಳಾಪಟ್ಟಿ ಪರಿಷ್ಕರಣೆ ಬಗ್ಗೆ ಆದೇಶವನ್ನು ಹೊರಡಿಸಿದೆ. ಈ ರೈಲು ಬೆಂಗಳೂರಿನ ಕೃಷ್ಣರಾಜಪುರ (ಕೆ. ಆರ್. ಪುರ) ನಿಲ್ದಾಣದಲ್ಲಿ ನಿಲುಗಡೆಗೊಳ್ಳುವ ಸಮಯವನ್ನು ಮಾತ್ರ ಪರಿಷ್ಕರಣೆ ಮಾಡಿ ಆದೇಶಿಸಲಾಗಿದೆ.

Madurai Bengaluru Vande Bharat Express KR Puram Station Schedule Change

ಮಧುರೈ- ಬೆಂಗಳೂರು ಕಂಟೋನ್ಮಂಟ್ ನಿಲ್ದಾಣಗಳ ನಡುವೆ ವಾರಕ್ಕೆ 6 ದಿನ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿಯನ್ನು ಕೆ. ಆರ್. ಪುರ ನಿಲ್ದಾಣದಲ್ಲಿ ಈ ಕೆಳಗಿನಂತೆ ಪರಿಷ್ಕರಣೆ ಮಾಡಲಾಗಿದೆ.

ವೇಳಾಪಟ್ಟಿಯ ಮಾಹಿತಿ: ಸೆಪ್ಟೆಂಬರ್ 5, 2024ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 20671 ಮಧುರೈ-ಬೆಂಗಳೂರು ಕಂಟೋನ್ಮಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 12:50/ 12:52 ಗಂಟೆಯ ಬದಲು 12:30/ 12:32 ಗಂಟೆಗೆ ಕೃಷ್ಣರಾಜಪುರ ನಿಲ್ದಾಣಕ್ಕೆ ಆಗಮಿಸಿ/ ನಿರ್ಗಮಿಸಲಿದೆ.

ಸೆಪ್ಟೆಂಬರ್ 15, 2024 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 20672 ಬೆಂಗಳೂರು ಕಂಟೋನೆಂಟ್-ಮಧುರೈ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು 13:55/ 13:57 ಗಂಟೆಯ ಬದಲು 13:43/ 13:45 ಗಂಟೆಗೆ ಕೃಷ್ಣರಾಜಪುರಂ ನಿಲ್ದಾಣಕ್ಕೆ ಆಗಮಿಸಿ/ ನಿರ್ಗಮಿಸಲಿದೆ ಎಂದು ಮಾಹಿತಿ ನೀಡಲಾಗಿದೆ.

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ನಮ್ಮ ದಕ್ಷಿಣದ ರಾಜ್ಯಗಳ ತ್ವರಿತ ಅಭಿವೃದ್ಧಿಯ ಅಗತ್ಯವಿದೆ. ದಕ್ಷಿಣ ಭಾರತವು ಪ್ರತಿಭೆ, ಸಂಪನ್ಮೂಲಗಳು ಮತ್ತು ಅವಕಾಶಗಳಿಂದ ಸಮೃದ್ಧವಾದ ಪ್ರದೇಶವಾಗಿದೆ. ಆದ್ದರಿಂದ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ವಲಯದ ಅಭಿವೃದ್ಧಿ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ" ಎಂದು ಹೇಳಿದರು.

"ಕಳೆದ 10 ವರ್ಷಗಳಲ್ಲಿ ಈ ರಾಜ್ಯಗಳಲ್ಲಿ ರೈಲ್ವೆ ಸಾಧಿಸಿದ ಪ್ರಗತಿಯು ಈ ಬದ್ಧತೆಗೆ ಸಾಕ್ಷಿಯಾಗಿದೆ. ಈ ವರ್ಷದ ಬಜೆಟ್‌ನಲ್ಲಿ ನಾವು ತಮಿಳುನಾಡಿಗೆ ರೈಲ್ವೆ ಬಜೆಟ್‌ಗಾಗಿ 6,000 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದೇವೆ, ಇದು 2014ರ ಬಜೆಟಿಗಿಂತ 7 ಪಟ್ಟು ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಈಗಾಗಲೇ 6 ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎರಡು ಹೊಸ ರೈಲುಗಳ ಸೇರ್ಪಡೆಯೊಂದಿಗೆ ಈ ಸಂಖ್ಯೆ ಈಗ 8 ಏರಲಿದೆ" ಎಂದರು.

"ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು 2014ರ ಬಜೆಟ್ ಗಿಂತ 9 ಪಟ್ಟು ಹೆಚ್ಚಾಗಿದೆ. ಇಂದು, 8 ಜೋಡಿ ವಂದೇ ಭಾರತ್ ರೈಲುಗಳು ಇಡೀ ಕರ್ನಾಟಕ ರಾಜ್ಯವನ್ನು ಜೋಡಿಸುತ್ತಿವೆ" ಎಂದು ಮೋದಿ ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+