ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.16ರಂದು ಮಾಗಡಿ ರಸ್ತೆ-ಮೈಸೂರು ರಸ್ತೆ ಮೆಟ್ರೋ ಉದ್ಘಾಟನೆ

|
Google Oneindia Kannada News

ಬೆಂಗಳೂರು, ನವೆಂಬರ್ 13 : ಉದ್ಯಾನ ನಗರಿ ಬೆಂಗಳೂರಿಗರಿಗೆ ಸಿಹಿ ಸುದ್ದಿ. ಮಾಗಡಿ ರಸ್ತೆ-ಮೈಸೂರು ರಸ್ತೆ ನಡುವೆ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 16ರಂದು ರೈಲು ಸಂಚಾರ ಔಪಚಾರಿಕವಾಗಿ ಉದ್ಘಾಟನೆಗೊಳ್ಳಲಿದೆ.

ಮಾಗಡಿ ರಸ್ತೆಯ ಕುಷ್ಠರೋಗ ಆಸ್ಪತ್ರೆ ಬಳಿಯಿಂದ ಮೈಸೂರು ರಸ್ತೆವರೆಗಿನ 6.4 ಕಿ.ಮೀ ಮಾರ್ಗದ ರೈಲು ಸಂಚಾರ ನವೆಂಬರ್‌ 16ರ ಸಂಜೆ 4 ಗಂಟೆಗೆ ಉದ್ಘಾಟನೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲಾ ಹೇಳಿದ್ದಾರೆ. [ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ವಿವರಗಳು]

namma metro

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ಅನಂತಕುಮಾರ್‌ ಅವರು ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಉದ್ಘಾಟನೆಯಾದ ಒಂದೆರಡು ದಿನಗಳ ನಂತರ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.[ಮೆಟ್ರೋದಲ್ಲಿ ಹಿಂದಿ : ಪ್ರತಿಭಟನೆಯ ದನಿಗೆ ಕಿವಿಯಾಗಬನ್ನಿ]

10 ನಿಮಿಷಕ್ಕೆ ಒಂದು ರೈಲು : 6.4 ಕಿ.ಮೀ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದೆ. ಎಂಜಿ.ರಸ್ತೆಯಿಂದ-ಬೈಯಪ್ಪನಹಳ್ಳಿ ತನಕದ ರೀಚ್ - 1 ಮಾರ್ಗದಲ್ಲಿ ಇರುವಂತೆಯೇ ಟಿಕೆಟ್ ದರವಿರುತ್ತದೆ. ನವೆಂಬರ್ 16ರಂದು ಮಾಗಡಿ ರಸ್ತೆ ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದ್ದು, ಮೈಸೂರು ರಸ್ತೆ ನಿಲ್ದಾಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.

6 ನಿಲ್ದಾಣಗಳು : ಮಾಗಡಿ ರಸ್ತೆ-ಮೈಸೂರು ರಸ್ತೆ ಮಾರ್ಗದಲ್ಲಿ ಮಾಗಡಿ ರಸ್ತೆ, ಹೊಸಹಳ್ಳಿ, ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ ಮತ್ತು ಮೈಸೂರು ರಸ್ತೆ ಸೇರಿ ಆರು ನಿಲ್ದಾಣಗಳಿವೆ.

bmrcl

ಈಗಾಗಲೇ ನಮ್ಮ ಮೆಟ್ರೋ ರೈಲು ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ಮತ್ತು ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ಸಂಚಾರ ನಡೆಸುತ್ತಿದೆ. ಈ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾದರೆ ಮೆಟ್ರೋ ಯೋಜನೆಯ ಮೂರನೇ ಮಾರ್ಗ ಉದ್ಘಾಟನೆಯಾದಂತಾಗುತ್ತದೆ.

English summary
Bangalore Metro Rail Corporation (BMRCL) Managing Director Pradeep Singh said, 6.4 km Namma metro Magadi road-Mysuru road stretch will be inaugurated on November 16.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X