Maha Shivaratri 2023: ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ
ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಸಾಯಿಖಾನೆಗಳನ್ನು ಮುಚ್ಚುವಂತೆ ಬಿಬಿಎಂಪಿ ಆದೇಶಿಸಿದೆ.
ಬೆಂಗಳೂರು, ಫೆಬ್ರವರಿ. 16: ಫೆಬ್ರವರಿ 18 ರ ಮಹಾ ಶಿವರಾತ್ರಿಯಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸುತ್ತೋಲೆ ಹೊರಡಿಸಿದೆ.
ಫೆಬ್ರವರಿ 16 ರಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪ್ರಾಣಿ ಕಲ್ಯಾಣ) ಫೆಬ್ರವರಿ 18 ರಂದು ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದ್ದಾರೆ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಸಾಯಿಖಾನೆಗಳನ್ನು ಮುಚ್ಚುವಂತೆ ಬಿಬಿಎಂಪಿ ಆದೇಶಿಸಿದೆ ಎಂದು ದಿ ಹಿಮದೂ ವರದಿ ಮಾಡಿದೆ.
ಪ್ರತಿ ವರ್ಷ ಗಣೇಶ ಚತುರ್ಥಿ, ಶ್ರೀ ರಾಮ ನವಮಿ ಮತ್ತು ಕೃಷ್ಣ ಜನ್ಮಾಷ್ಟಮಿ ಸೇರಿದಂತೆ ಪ್ರಮುಖ ಹಬ್ಬಗಳಲ್ಲಿ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸುತ್ತದೆ. ಇದಲ್ಲದೆ, ಅಕ್ಟೋಬರ್ 2 ಗಾಂಧಿ ಜಯಂತಿಯಂದು ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ಬಿಬಿಎಂಪಿ ನಿಷೇಧಿಸಿದೆ.

ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿರುವ ಮಹಾ ಶಿವರಾತ್ರಿಗೆ ನಾಡು ಸಜ್ಜಾಗಿದೆ. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಶಿವರಾತ್ರಿಯಂದು ಶಿವ ಭಕ್ತರು ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ ಶಿವ ಪೂಜೆಯನ್ನು ಮಾಡುವ ಮೂಲಕ ಹಬ್ಬ ಆಚರಿಸುತ್ತಾರೆ.
ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿಯಲ್ಲಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆಯಿದೆ. ಹೀಗಾಗಿ ಹಲವು ದೇವಾಲಯಗಳಲ್ಲಿ ಈಗಾಗಲೇ ಎಲ್ಲಾ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ದೇವಸ್ಥಾನಗಳ ಜೊತೆ ಜೊತೆಗೆ ಸಂಘ ಸಂಸ್ಥೆಗಳು ಶಿವರಾತ್ರಿಯ ಆಚರಣೆ ನಡೆಸುತ್ತವೆ. ರಾತ್ರಿ ಜಾಗರಣೆ ಮಾಡಲು ಭಜನೆ, ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತಾರೆ.












Click it and Unblock the Notifications