ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರ, ಕರ್ನಾಟಕದಲ್ಲಿ 18-44 ವರ್ಷದವರಿಗೆ ಇಲ್ಲ ಕೊರೊನಾ ಲಸಿಕೆ!

|
Google Oneindia Kannada News

ಬೆಂಗಳೂರು/ಮುಂಬೈ, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕರ್ನಾಟಕದಲ್ಲಿ ಮೇ 14ರಿಂದ ಮುಂದಿನ ಆದೇಶದವರೆಗೂ 18 ರಿಂದ 44 ವರ್ಷದವರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ತಾತ್ಕಾಲಿಕವನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮಹಾನಗರಗಳಿಂದ ಹಳ್ಳಿಗಳಿಗೆ ಶಿಫ್ಟ್ ಆಗುತ್ತಿರುವ ಕೊರೊನಾವೈರಸ್!ಮಹಾನಗರಗಳಿಂದ ಹಳ್ಳಿಗಳಿಗೆ ಶಿಫ್ಟ್ ಆಗುತ್ತಿರುವ ಕೊರೊನಾವೈರಸ್!

ಮಹಾರಾಷ್ಟ್ರದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೊರೊನಾವೈರಸ್ ಲಸಿಕೆ ಅಭಾವದ ಬಗ್ಗೆ ಚರ್ಚೆ ನಡೆಸಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಈ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

Maharashtra And Karnataka Govt Temporarily Suspends Corona Vaccination To 18-44 Aged People


ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

117 ದಿನಗಳಲ್ಲಿ 17.70 ಕೋಟಿ ಜನರಿಗೆ ಲಸಿಕೆ:

ಭಾರತದಲ್ಲಿ ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Maharashtra And Karnataka Govt Temporarily Suspends Corona Vaccination To 18-44 Aged People.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X