• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಚ್.ಎಸ್.ದೊರೆಸ್ವಾಮಿ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

|

ಬೆಂಗಳೂರು, ಅಕ್ಟೋಬರ್ 03 : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರಿಗೆ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಗಾಂಧೀಜಿಯವರ ಸಂದೇಶಗಳ ಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಎಚ್.ಎಸ್.ದೊರೆಸ್ವಾಮಿ ಆಯ್ಕೆ

ಭಾನುವಾರ ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಎಚ್.ಎಸ್.ದೊರೆಸ್ವಾಮಿ ಅವರಿಗೆ ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಗಾಂಧೀಜಿಯವರ ಸಂದೇಶದ ಹೊತ್ತಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ ನಾಲ್ಕು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. 2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ನಡೆಯಿತು.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಈ ಪ್ರಶಸ್ತಿಯು 5 ಲಕ್ಷ ರೂ. ನಗದನ್ನು ಒಳಗೊಂಡಿದೆ.

English summary
Karnataka Chief Minister Siddaramaiah presented Mahatma Gandhi Seva Award Karnataka-2017 to Freedom fighter H.S.Doreswamy on October 2, 2017. Award instituted by the Department of Information and Public Relations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X