ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈತಪ್ಪಿದ ನಿರೀಕ್ಷಿತ ಸಚಿವ ಸ್ಥಾನ: ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 06: ಪಕ್ಷಕ್ಕೆ ರಾಜೀನಾಮೆ ನೀಡಿ ಬಂದು ಯಡಿಯೂರಪ್ಪ ಅವರನ್ನು ಸಿಎಂ ಮಾಡಿ, ಉಪಚುನಾವಣೆ ಸ್ಪರ್ಧಿಸಿ ಗೆದ್ದಿದ್ದ ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಯಡಿಯೂರಪ್ಪ ಸರ್ಕಾರ ರಚನೆಗೆ 'ತ್ಯಾಗ' ಮಾಡಿ ಉಪಚುನಾವಣೆ ಸ್ಪರ್ಧಿಸಿ ಗೆದ್ದಿರುವ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ.

ಉಪಚುನಾವಣೆ ಗೆದ್ದಿರುವ ಎಲ್ಲಾ ಮಾಜಿ ಅನರ್ಹರಿಗೆ ಸಚಿವ ಸ್ಥಾನ ನೀಡಲಾಗತ್ತದೆ ಎನ್ನಲಾಗಿತ್ತು ಆದರೆ. ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. ರಮೇಶ್ ಜಾರಕಿಹೊಳಿ ಅವರು ಬಹು ಪ್ರಯತ್ನ ಪಟ್ಟರಾದರೂ ಸಹ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಇದು ಹಲವರ ಆಶ್ಚರ್ಯಕ್ಕೆ ಕಾರಣವಾಗಿದೆ.

Mahesh Kumtalli Not In The List Of New Ministers

ಈ ಬಗ್ಗೆ ಸಮಾಧಾನದಿಂದಲೇ ಪ್ರತಿಕ್ರಿಯಿಸಿರುವ ಮಹೇಶ್ ಕುಮಟಳ್ಳಿ, 'ಯಾವ ಕಾರಣಕ್ಕೆ ಸಚಿವ ಸ್ಥಾನ ತಪ್ಪಿದೆ ಎಂಬುದು ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಬಳಿ ಮಾತನಾಡುವೆ ಎಂದಿದ್ದಾರೆ'.

'ಯಡಿಯೂರಪ್ಪ ಅವರು ಕೊಟ್ಟ ಮಾತು ತಪ್ಪಿದ್ದಾರೆ ಎಂದು ಹೇಳುವುದು ಆತುರದ ನಿರ್ಧಾರವಾಗುತ್ತದೆ. ಏನೋ ಸ್ವಲ್ಪ ಗೊಂದಲವಾಗಿದೆ. ಈ ಬಗ್ಗೆ ಕೂತು ಚರ್ಚೆ ಮಾಡಿ ಬಗೆಹರಿಸಿಕೊಳ್ಳುತ್ತೇವೆ' ಎಂದರು.

'ಇಷ್ಟಕ್ಕೆ ಎಲ್ಲವೂ ಮುಗಿದಿಲ್ಲ, ನಾನು ಪಕ್ಷದ ಕಾರ್ಯಕರ್ತನಾಗಿ ಇರಲೂ ತಯಾರಿದ್ದೇನೆ. ಯಡಿಯೂರಪ್ಪ ಅವರಿಗಾಗಲಿ ಅಥವಾ ಪಕ್ಷಕ್ಕಾಗಲಿ ಮುಜುಗರ ಉಂಟು ಮಾಡುವ ಕೆಲಸ ಮಾಡುವುದಿಲ್ಲ' ಎಂದಿದ್ದಾರೆ.

English summary
BJP MLA 'former disqualified' Mahesh Kumtalli not getting minister post. He said 'i will discuss with Yeidyurappa about the issue'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X