ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂದ್ ವೈಫಲ್ಯಕ್ಕೆ ಮಾಧ್ಯಮದ ಮೇಲೆ ಗೂಬೆ ಕೂರಿಸಿದ ವಾಟಾಳ್

|
Google Oneindia Kannada News

ಬೆಂಗಳೂರು, ಜೂನ್ 12: ಮಾಧ್ಯಮಗಳಿಂದಲೇ ಬಂದ್ ವಿಫಲವಾಗುತ್ತಿದೆ ಎಂದು ಕನ್ನಡ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ವೈಫಲ್ಯಕ್ಕೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದರು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು (ಜೂನ್ 12) ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ಬಳಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ವಾಟಾಳ್ ನಾಗರಾಜ್ ಸುದ್ದಿ ಗೋಷ್ಠಿ ನಡೆಸಿದರು. ನಾಳೆಯಿಂದ ಮತ್ತೆ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಕರ್ನಾಟಕ ಬಂದ್ ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆಕರ್ನಾಟಕ ಬಂದ್ ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ

ನಮ್ಮ ಹೋರಾಟವೇನಿದ್ದರೂ ರಾಜ್ಯದ ರೈತರ ಪರ. ನಮ್ಮ ರೈತರು ಕುಡಿಯೋಕೆ ನೀರು ಸಿಗದೆ ಪರದಾಡುತ್ತಿದ್ದಾರೆ, ಆದರೆ ಸರ್ಕಾರ ಮಾತ್ರ ಈ ಯಾವುದರ ಬಗ್ಗೆಯು ತಲೆಕೆಡಿಸಿಕೊಳ್ಳದೆ ದಿವ್ಯ ಮೌನ ವಹಿಸಿದೆ ಎಂದು ಅವರು ದೂರಿದರು.

Main reason for the failure of Karnataka bandh is Media: Vatala Nagaraj

ಕಾಸರಗೋಡಿನಲ್ಲಿ ಮಲಯಾಳಿ,ಬೆಳಗಾವಿಯಲ್ಲಿ ಮರಾಠಿಯನ್ನು ಹೇರಲಾಗುತ್ತಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

Main reason for the failure of Karnataka bandh is Media: Vatala Nagaraj

ಮಹಾದಾಯಿ ಸೇರಿದಂತೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರಕಾರ ವಿಫಲವಾಗಿರುವುದನ್ನು ಖಂಡಿಸಿ, ಇಂದು ( ಜೂ. 12) ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆನೀಡಿದ್ದವು.

English summary
Main reason for the failure of Karnataka bandh is Media. They don't support us, Vatala Nagaraj, Kannada vatal party leader told today. He was addressing a pressmeet near Town Hall, Bengaluru, this morning (June 12th). The bandh has called by pro Kannada organistations to oppose government's failure in solving number of issues including Mahadayi river dispute and drinking water crisis in several parts of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X