Get Updates
Get notified of breaking news, exclusive insights, and must-see stories!

BIG Good News: ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಗೋಲ್ ಗುಂಬಜ್ ಸೇರಿ ಹಲವು ಪ್ರಮುಖ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆ

Major Express Trains: ಕೇಂದ್ರ ಸರ್ಕಾರವು ರೈಲ್ವೆಗೆ ಸಂಬಂಧಪಟ್ಟಂತೆ ಆಗಾಗ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುತ್ತದೆ. ಹಾಗೆಯೇ ಇದೀಗ ಕರ್ನಾಟಕ ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಭಾಗಗಳಿಗೆ ಸಂಚಾರ ಮಾಡುವ ಪ್ರಮುಖ ಎಕ್ಸ್‌ಪ್ರೆಸ್‌ ರೈಲುಗಳು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಕೊನೆಗೂ ಕೇಂದ್ರ ಅನುಮತಿ ನೀಡಿದೆ. ಹಾಗಾದ್ರೆ ಯಾವೆಲ್ಲಾ ರೈಲುಗಳು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಹುದಿನಗಳಿಂದ ಈ ಎಕ್ಸ್‌ಪ್ರೆಸ್‌ ರೈಲುಗಳನ್ನು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಪ್ರಯಾಣಿಕರು ಕೇಳಿಕೊಳ್ಳುತ್ತಲಿದ್ದರು. ಇದೀಗ ಕೊನೆಗೂ ಈ ಬೇಡಿಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ. ಈ ಮೂಲಕ ಈ ಭಾಗದ ಪ್ರಯಾಣಿಕರಿಗೆ ಬಿಗ್ ಗುಡ್‌ ನ್ಯೂಸ್‌ ಸಿಕ್ಕಂತಾಗಿದೆ. ರೈಲುಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

Major Express Trains to Now Halt at Nayandahalli Railway Station Big Relief for Bengaluru Passengers

ಯಾವೆಲ್ಲಾ ರೈಲುಗಳ ನಿಲುಗಡೆ?: ಮೈಸೂರು - ಕೆಎಸ್‌ಆರ್ ಸಿಟಿ ಚಾಮುಂಡಿ ಎಕ್ಸ್‌ಪ್ರೆಸ್ (16215/16216), ಮೈಸೂರು - ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (17307/17308), ಟುಟಿಕೋರಿನ್ - ಮೈಸೂರು ಎಕ್ಸ್‌ಪ್ರೆಸ್ (16235/16236) ಹಾಗೂ ಮೈಸೂರು - ಪಂಡರಾಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ (16535/16536) ರೈಲುಗಳನ್ನು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಅಧಿಕೃತವಾಗಿ ನಿಲುಗಡೆಗೆ ಕೆಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ವಿ.ಸೋಮಣ್ಣ ಅವರು ತಿಳಿಸಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಪಶ್ಚಿಮ ಭಾಗದಲ್ಲಿ ವಾಸ ಮಾಡುವ ತುಂಬಾ ಜನ ಪ್ರಯಾಣಿಕರು, ಅದರಲ್ಲೂ ವಿಶೇಷವಾಗಿ ಮೈಸೂರು, ಬಾಗಲಕೋಟೆ, ವಿಜಯಪುರ, ಪಂಡರಾಪುರ ಹಾಗೂ ತಮಿಳುನಾಡಿನ ಟುಟಿಕೋರಿನ್ ಭಾಗಗಳಿಗೆ ತೆರಳುವವರು, ನಾಯಂಡಹಳ್ಳಿ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕು ಎಂದು ಬಹುದಿನಗಳಿಂದ ಬೇಡಿಕೆ ಇಡುತ್ತಾ ಬಂದಿದ್ದರು.

ಈ ರೈಲು ನಿಲ್ದಾಣದಲ್ಲಿ ಈ ರೈಲುಗಳ ನಿಲುಗಡೆ ಇಲ್ಲದ ಕಾರಣ ಅವರು ಕೆಎಸ್‌ಆರ್ ಬೆಂಗಳೂರು ನಗರ ನಿಲ್ದಾಣ ಅಥವಾ ಯಶವಂತಪುರಕ್ಕೆ ಹೋಗಬೇಕಿತ್ತು. ಅಲ್ಲಿಂದ ರೈಲು ಹತ್ತುವಂತಹ ಪರಿಸ್ಥಿತಿ ಇತ್ತು. ಇದರಿಂದ ಸಮಯ ವ್ಯರ್ಥ ಆಗುವುದಲ್ಲದೆ, ಸಂಚಾರದ ಸಮಸ್ಯೆಯನ್ನೂ ಕೂಡ ಈ ಭಾಗದ ಪ್ರಯಾಣಿಕರು ಎದುರಿಸುತ್ತಿದ್ದರು. ಇದೀಗ ಈ ಬೇಡಿಕೆ ಕೊನೆಗೂ ಈಡೇರಿದ್ದು, ಇಲ್ಲಿನ ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಂತಾಗಿದೆ.

ಯಾರಿಗೆಲ್ಲಾ ಅನುಕೂಲ?: ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಈ ಎಕ್ಸ್‌ಪ್ರೆಸ್‌ ರೈಲುಗಳಿ ನಿಲುಗಡೆಗೆ ಅನುಮತಿ ಸಿಕ್ಕಿದೆ. ಇದರಿಂದ ಪ್ರಯಾಣಿಕರಿಗೆ ಸಮಯ ಉಳಿತಾಯ, ಸಂಚಾರದ ಸುಲಭತೆ ಹಾಗೂ ಅನುಕೂಲಕರ ಸಂಪರ್ಕ ದೊರೆಯಲಿದೆ. ಅದರಲ್ಲೂ ವಿಶೇಷವಾಗಿ ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ವಯೋವೃದ್ಧ ಪ್ರಯಾಣಿಕರಿಗೆ ಇದು ತುಂಬಾ ಅನುಕೂಲ ಆಗಲಿದೆ.

ವಿ.ಸೋಮಣ್ಣ ಹೇಳಿದ್ದೇನು?: ಕೇಂದ್ರ ಸಚಿವ ವಿ.ಸೋಮಣ್ಣ ಅವರು ಟ್ವೀಟ್‌ನಲ್ಲಿ, "ಪ್ರಯಾಣಿಕರ ಅನುಕೂಲಕ್ಕಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು," ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನೂ ಈ ನಿರ್ಧಾರದಿಂದ ಬೆಂಗಳೂರು ನಗರದಲ್ಲಿನ ರೈಲು ನಿಲ್ದಾಣಗಳ ಮೇಲಿನ ಒತ್ತಡವೂ ಕಡಿಮೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ, ನಾಯಂಡಹಳ್ಳಿ ರೈಲು ನಿಲ್ದಾಣದ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚಾದಂತಾಗಲಿದೆ ಎಂದು ಹೇಳಲಾಗುತ್ತದೆ.

ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಕ್ರಾಂತಿ: ವಿ.ಸೋಮಣ್ಣ ಅವರು ರಾಜ್ಯ ರೈಲ್ವೆ ಖಾತೆ ಸಚಿವರಾಗಿನಿಂದಲೂ ರಾಜ್ಯ ರೈಲ್ವೆ ವಿಭಾಗದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಅದರಲ್ಲೂ ಪ್ರಯಾಣಿಕರ ಬೇಡಿಕೆಗಳನ್ನು ಈಡೇಸಿರುವ ಕೆಲಸವನ್ನು ಮಾಡುತ್ತಿದ್ದಾರೆ. ಕೇಂದ್ರದ ಗಮನಕ್ಕೆ ತಂದು ಅವುಗಳನ್ನು ಈಡೇರಿಸುವ ಕೆಲಸವನ್ನು ಮಾಡುತ್ತಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+