Bengaluru fire accident: ಬೆಂಗಳೂರಿನ ಅಂಜನಾಪುರ, ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭೀಕರ ಅಗ್ನಿ ಅವಘಡ
ಬೆಂಗಳೂರು: ನಗರದ ಅಂಜನಾಪುರದ ಹಾಸಿಗೆ ಗೋದಾಮಿನಲ್ಲಿ (Mattress Warehouse) ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:45ಕ್ಕೆ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದು ಕಳೆದ ನಾಲ್ಕು ದಿನಗಳಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಮೂರನೇ ಅತಿದೊಡ್ಡ ಅಗ್ನಿ ದುರಂತ ಎನ್ನಲಾಗಿದೆ. ಇದಾಗಿದೆ.
ಐದು ವಾಹನ, ಲಕ್ಷಾಂತರ ಬೆಲೆ ಮೌಲ್ಯದ ವಸ್ತು ಭಸ್ಮ
ಬೆಂಕಿಯ ಕೆನ್ನಾಲಿಗೆಗೆ ಗೋದಾಮಿನಲ್ಲಿದ್ದ ಐದು ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ ಮತ್ತು ಹಾಸಿಗೆಗಳು ಬೆಂಕಿಗೆ ಆಹುತಿಯಾಗಿವೆ. ಗೋದಾಮಿನಿಂದ ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರಕ್ಕೆ ಕಂಡುಬಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹತ್ತಿರದ ಅಪಾರ್ಟ್‌ಮೆಂಟ್‌ಗಳಲ್ಲಿದ್ದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸಲಾಯಿತು.

ಬೆಂಕಿ ನಂದಿಸುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಅಂಜನಾಪುರ ಭಾಗದಲ್ಲಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ 96 ಗಂಟೆಗಳಲ್ಲಿ ಇದು ಮೂರನೇ ಪ್ರಮುಖ ಅಗ್ನಿ ಅವಘಡವಾಗಿದ್ದು, ನಗರದ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೇಸಿಗೆಯ ಆರಂಭದಲ್ಲೇ ಇಂತಹ ಸರಣಿ ದುರಂತಗಳು ಸಂಭವಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಎಚ್‌ಎಸ್‌ಆರ್ ಲೇಔಟ್‌ನಲ್ಲೂ ಅಗ್ನಿ ಅವಘಡ
ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ (HSR Layout) 5ನೇ ಮುಖ್ಯರಸ್ತೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂಗ್ರಹಿಸಿಡಲಾಗಿದ್ದ ಪೈಪ್‌ಗಳು ಹಾಗೂ ಕೇಬಲ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಇದರಿಂದ ಸಿಲ್ಕ್ ಬೋರ್ಡ್ ಕಡೆಗೆ ಸಾಗುವ ವಾಹನ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಪ್ಲಾಸ್ಟಿಕ್ ಪೈಪ್‌ಗಳು ಸುಡುತ್ತಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ವಾಹನ ಸವಾರರ ದೃಷ್ಟಿ ಗೋಚರತೆಗೆ ಅಡ್ಡಿಯಾಗಿದೆ.

ಈ ಅವಘಡದ ಹಿನ್ನೆಲೆಯಲ್ಲಿ ಎಚ್‌ಎಸ್‌ಆರ್ ಲೇಔಟ್‌ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಾಗುವ ರಸ್ತೆಯಲ್ಲಿ ವಾಹನಗಳು ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ಸಾಧ್ಯವಾದಷ್ಟು ಮಟ್ಟಿಗೆ ಸಿಲ್ಕ್ ಬೋರ್ಡ್ ತಲುಪಲು ಪರ್ಯಾಯ ರಸ್ತೆಗಳನ್ನು ಬಳಸಲು ಸಂಚಾರಿ ಪೊಲೀಸರು ಸೂಚಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಈ ಭಾಗದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಸರಣಿ ಬೆಂಕಿ ಅವಘಡಗಳು
ಅಂಜನಾಪುರ ಮತ್ತು ಎಚ್‌ಎಸ್‌ಆರ್ ಲೇಔಟ್ ಅವಘಡಗಳಿಗೂ ಮುನ್ನ, ನಗರದ ಕುಂಬಾರಪೇಟೆ ಮತ್ತು ದಾಸರಹಳ್ಳಿಯಲ್ಲೂ ಭೀಕರ ಅಗ್ನಿ ಅನಾಹುತಗಳು ಸಂಭವಿಸಿವೆ. ಈ ಸರಣಿ ದುರಂತಗಳು ನಗರದ ವಾಣಿಜ್ಯ ಘಟಕಗಳ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿವೆ. ಶನಿವಾರ ರಾತ್ರಿ ದಾಸರಹಳ್ಳಿಯ ಭುವನೇಶ್ವರಿ ನಗರದಲ್ಲಿರುವ ಎಸ್.ವಿ.ಕೇಕ್ ಪ್ಯಾಲೇಸ್ ಬೇಕರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕೃಷ್ಣ ಎಂಬುವವರು ಕಳೆದ ಆರು ವರ್ಷಗಳಿಂದ ಈ ಬೇಕರಿಯನ್ನು ನಡೆಸುತ್ತಿದ್ದರು. ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಬೇಕರಿಯಲ್ಲಿದ್ದ ಆಹಾರ ಪದಾರ್ಥಗಳು, ಪಾನೀಯಗಳು ಮತ್ತು ಪೀಠೋಪಕರಣಗಳು ಸಂಪೂರ್ಣವಾಗಿ ನಾಶವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದ್ದು, ಮಾಲೀಕರು ಕಂಗಾಲಾಗಿದ್ದಾರೆ.
ಇದಕ್ಕೂ ಮೊದಲು ಜನನಿಬಿಡ ಪ್ರದೇಶವಾದ ಕುಂಬಾರಪೇಟೆಯಲ್ಲೂ ಅಗ್ನಿ ಅವಘಡ ಸಂಭವಿಸಿ ಆತಂಕ ಸೃಷ್ಟಿಸಿತ್ತು. ಕಿರಿದಾದ ರಸ್ತೆಗಳಿರುವ ಇಂತಹ ಪ್ರದೇಶಗಳಲ್ಲಿ ಬೆಂಕಿ ನಂದಿಸುವುದು ಅಗ್ನಿಶಾಮಕ ದಳಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಘಟಕಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಸರಣಿ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ, ವಸತಿ ಪ್ರದೇಶಗಳಲ್ಲಿರುವ ವಾಣಿಜ್ಯ ಮಳಿಗೆಗಳ ಅಗ್ನಿ ಸುರಕ್ಷತಾ ಪರವಾನಗಿ (NOC) ಮತ್ತು ಸುರಕ್ಷತಾ ಕ್ರಮಗಳನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಿದೆ. ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications