ಅಗ್ನಿ ಅವಘಡ; ಬೆಂಗಳೂರಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು, ಫೆಬ್ರವರಿ 17; ನಗರದ ಹೃದಯ ಭಾಗವಾದ ಆನಂದ ರಾವ್ ವೃತ್ತದ ಬೆಸ್ಕಾಂ ಟ್ರಾನ್ಸಪಾಮರ್ಮ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಘಟನೆಗೆ ಸ್ಪಷ್ಟ ಕಾರಣ ಏನು ಎಂಬುದು ನಿಖರವಾಗಿ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕೂಟ್‌ನಿಂದ 20 ಕೆಬಿ ಸಾಮರ್ಥ್ಯದ ಟ್ರಾನ್ಸಪಾಮರ್ಮ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ, ತಕ್ಷಣವೇ ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಬೃಹತ್ ಟ್ರಾನ್ಸಪಾರ್ಮರ್ ಅಗ್ನಿಗಾಹುತಿ ಆಗಿದ್ದರಿಂದ ವಿಧಾನಸೌಧ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸ ಆಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ವಿಧಾನಸೌಧ, ರಾಜಭವನ, ಅವೆನ್ಯೂ ರಸ್ತೆ, ಚಿಕ್ಕಪೇಟೆ, ಗಾಂಧಿನಗರ, ಮೆಜೆಸ್ಟಿಕ್, ಕಾಟನ್‌ಪೇಟೆ, ಶೇಷಾದ್ರಿಪುರ, ಮಲ್ಲೇಶ್ವರ, ವಸಂತ ನಗರದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸ ಆಗಲಿದೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಬೆಂಕಿ ಹೊತ್ತಿಕೊಂಡಾಗ ವಿಧಾನಸೌಧದಲ್ಲಿ ಅಧಿವೇಶನ ನಡೆಯುತ್ತಿತ್ತು.












Click it and Unblock the Notifications