Makar Sankranti: ಯಶವಂತಪುರ - ತಾಳಗುಪ್ಪ ಮಾರ್ಗಕ್ಕೆ ಮತ್ತೊಂದು ರೈಲು: ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಇನ್ನೊಂದು ವಾರ ಮಾತ್ರ ಬಾಕಿ ಇದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಹಿನ್ನೆಲೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳನ್ನು ಬಿಡಲಾಗಿದೆ. ಈ ಮೂಲಕ ರೈಲ್ವೆ ಇಲಾಖೆಯು ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನಿಂದ ವಿವಿಧ ಮಾರ್ಗಗಳಿಗೆ ಸಂಚರಿಸುವ ರೈಲುಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನೈರುತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಪ್ರಾರಂಭಿಸುವುದಕ್ಕೆ ನಿರ್ಧರಿಸಿದೆ.

ಈ ರೈಲುಗಳ ವಿಶೇಷ ಸಂಚಾರ
ಇನ್ನು ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 06585 ಯಶವಂತಪುರ- ತಾಳಗುಪ್ಪವಿಶೇಷ ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 06587 ಯಶವಂತಪುರ -ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ವಿಶೇಷ ಸಂಚಾರ ಇರಲಿದೆ. ಈ ರೈಲುಗಳ ವೇಳಾಪಟ್ಟಿ ವಿವರ ಮುಂದಿದೆ.
ರೈಲು ಸಂಖ್ಯೆ 06585 ಯಶವಂತಪುರ- ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಜನವರಿ 13ರ ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮುಂಜಾನೆ 4.45ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು 06586 ಸಂಖ್ಯೆಯ ವಿಶೇಷ ರೈಲು ಜನವರಿ 14ರ ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ರೈಲು ಸಂಖ್ಯೆ 06587 ಯಶವಂತ ಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಜನವರಿ 23ರ ರಾತ್ರಿ 10.45ಕ್ಕೆ ಯಶವಂತಪುರ ದಿಂದ ಸಂಚಾರ ಪ್ರಾರಂಭಿಸಲಿದೆ. ರೈಲು ಜನವರಿ 24ರ ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.
ಈ ಮಾರ್ಗಗಳಲ್ಲಿ ನಿಲುಗಡೆ
ಇನ್ನು ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 06585 ಯಶವಂತಪುರ- ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 06587 ಯಶವಂತ ಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಎರಡೂ ಮಾರ್ಗದಲ್ಲಿ ಸಂಚರಿಸುವ ಸಂದರ್ಭದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ರೈಲು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಕ್ರಾಂತಿ ಬುಕ್ಕಿಂಗ್ ಜೋರು
ಇನ್ನು ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರೈಲು ಹಾಗೂ ಬಸ್‌ಗಳ ಬುಕ್ಕಿಂಗ್ ಹೆಚ್ಚಾಗುವ ನಿರೀಕ್ಷೆ ಇದೆ. ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಪ್ರವಾಸ ಹಾಗೂ ಊರುಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿ ಇರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯಿಂದಲೂ ಸಹ ವಿಶೇಷ ರೈಲುಗಳನ್ನು ಪರಿಚಯಿಸಲಾಗಿದೆ. ಸಂಕ್ರಾಂತಿ ಹಬ್ಬದ ರಜೆ ಹಿನ್ನೆಲೆಯಲ್ಲಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಸಾಧ್ಯತೆ ಇದೆ. ಹೀಗಾಗಿ ರೈಲ್ವೆ ಇಲಾಖೆಯು ಇನ್ನಷ್ಟು ಹೆಚ್ಚುವರಿ ರೈಲುಗಳನ್ನು ಪರಿಚಯಿಸುವ ಸಾಧ್ಯತೆ ಇದೆ.












Click it and Unblock the Notifications