ಡಿಕೆ ರವಿ ಪ್ರಕರಣ ಸಿಬಿಐಗೆ ವಹಿಸಿ: ಪ್ರಧಾನಿಗೆ ಪತ್ರ
ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸಿಐಡಿಗೆ ವಹಿಸುವುದಾಗಿ ಸದನದಲ್ಲಿ ಮಂಗಳವಾರ ಘೋಷಿಸಿದ್ದಾರೆ. ಅದರೆ, ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಈ ಪ್ರಕರಣವನ್ನು ಸಿಐಡಿ ಬದಲಿಗೆ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಆನ್ ಲೈನ್ ನಲ್ಲಿ ಅರ್ಜಿ ಹಾಕಲಾಗಿದೆ. ನೀವು ಕೂಡಾ ಈ ಅರ್ಜಿಗೆ ಸಹಿ ಹಾಕಿ ಅಭಿಯಾನದಲ್ಲಿ ಪಾಲ್ಗೊಳ್ಳಬಹುದು. [ರವಿ ಸಾವಿಗೆ ಕಾರಣವೇನು? ಓಟ್ ಹಾಕಿ]
ಡಿಕೆ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವೈಯಕ್ತಿಕ ಸಮಸ್ಯೆಗಳಿತ್ತು ಎಂದು ಹೇಳಿರುವ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧ ಪ್ರತಿಪಕ್ಷದ ಸದಸ್ಯರು ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.[ಖಡಕ್ ಆಫೀಸರ್ ರವಿ ಸೂಪರ್ ಟ್ರ್ಯಾಕ್ ರೆಕಾರ್ಡ್]
ಡಿಕೆ ರವಿ ಅವರು 2009ರಿಂದ ಇಂದಿನ ತನಕ ನಿಷ್ಠಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ಬಡತನದ ಕುಟುಂಬದ ಬಂದಿರುವ ರವಿ ಅವರು ಐಎಎಸ್ ಅಧಿಕಾರಿಯಾಗುವ ಮೂಲಕ ಯುವಕರಿಗೆ ಮಾದರಿಯಾದವರು. ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದಷ್ಟು ಕಾಲ ಜನಮನ್ನಣೆ ಗಳಿಸಿದ್ದಲ್ಲದೆ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಂಡರು. [ಮರಳು ಮಾಫಿಯಾ ಎಂದರೇನು?]

ನಾಲ್ಕು ತಿಂಗಳ ಕಾಲದ ಅವಧಿಯಲ್ಲೇ ಮಂತ್ರಿ, ಡಿಎಸ್ ಮ್ಯಾಕ್ಸ್, ಕಾನ್ಪಿಡೆಂಟ್, ರಾಜೇಶ್ ಜ್ಯುವೆಲ್ಸ್ ಮುಂತಾದ ದೊಡ್ಡ ದೊಡ್ಡ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ರವಿ ಹಾಗೂ ಅವರ ತಂಡ 129ಕೋಟಿ ರು. ಗೂ ಅಧಿಕ ಮೊತ್ತದ ತೆರಿಗೆ ವಸೂಲಿ ಮಾಡಿ ಎಲ್ಲರ ಹುಬ್ಬೇರಿಸಿದ್ದಲ್ಲದೆ ಹಲವಾರು ಉದ್ಯಮಿಗಳ ದ್ವೇಷ ಕಟ್ಟಿಕೊಂಡರು. [ಭ್ರಷ್ಟರ ಶಿಕ್ಷೆಗೆ ಆಗ್ರಹಿಸಿದ ಫ್ಯಾನ್ ಪೇಜ್ ]
ಲ್ಯಾಂಡ್ ಮಾಫಿಯಾ, ಮರಳು ಮಾಫಿಯಾಗಳ ದಾಹಕ್ಕೆ ದಕ್ಷ ಅಧಿಕಾರಿ ಬಲಿಯಾಗಿದ್ದಾರೆ. ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಲು ತಕ್ಷಣಕ್ಕೆ ಸಾಧ್ಯವಿಲ್ಲವಾದರೂ ಮೃತ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಬೇಕಾದರೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಇವತ್ತು ರಾಜ್ಯದೆಲ್ಲೆಡೆಯಿಂದ ಜನರು ರವಿ ಅವರ ಸಾವಿಗೆ ಕಂಬನಿ ಮಿಡಿಯುತ್ತಿರುವುದುಅವರ ಪ್ರಾಮಾಣಿಕತೆಗೆ ಕನ್ನಡಿ ಹಿಡಿದ್ದಂತಿದೆ. [ಡಿಕೆ ರವಿ ಸಾವು : ಪ್ರಮುಖ ಬೆಳವಣಿಗೆಗಳು]
ರಾಜ್ಯ ಸರ್ಕಾರದ ಪ್ರಭಾವಿ ರಾಜಕಾರಣಿಗಳ ವಿರುದ್ಧ ನಿಂತಿದ್ದ ರವಿ ಅವರ ಸಾವಿನ ನಿಗೂಢತೆ ಬಯಲಾಗಬೇಕಾದರೆ ಸಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಈ ಪತ್ರವನ್ನು ಕಳಿಸಲಾಗುತ್ತದೆ ಎಂದು ಉತ್ತಿಷ್ಠ ಭಾರತ ತನ್ನ ಆನ್ ಲೈನ್ ಪಿಟಿಷನ್ ನಲ್ಲಿ ಹೇಳಿದ್ದಾರೆ. ಆಸಕ್ತರು ಇಲ್ಲಿ ಸಹಿ ಹಾಕಬಹುದು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications