• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ 2000 ಐಸಿಯು ಹಾಸಿಗೆಯ ಮೇಕ್‌ಶಿಫ್ಟ್ ಆಸ್ಪತ್ರೆ ನಿರ್ಮಾಣ

|

ಬೆಂಗಳೂರು, ಏಪ್ರಿಲ್ 23: ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು ಹತ್ತು ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಆಕ್ಸಿಜನ್ ಹಾಸಿಗೆ, ಐಸಿಯು ಹಾಸಿಗೆ, ವೆಂಟಿಲೇಟರ್ ಕೊರತೆಯಾಗುತ್ತಿದೆ. 15 ದಿನದೊಳಗೆ ಕನಿಷ್ಠ 2 ಸಾವಿರ ಐಸಿಯು ಹಾಸಿಗೆಯ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುವುದು. 2 ಸಾವಿರದ ಪೈಕಿ 800ಕ್ಕೆ ವೆಂಟಿಲೇಟರ್ ಅಳವಡಿಕೆಯಾಗಲಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲೇ ಮೇಕ್ ಶಿಫ್ಟ್ ನಲ್ಲಿ 250 ಹಾಸಿಗೆಯ ಐಸಿಯು, ಇನ್ನೊಂದು ಹೊಸ ಕಟ್ಟಡದಲ್ಲಿ 150-200 ಹಾಸಿಗೆಯ ಐಸಿಯು ಮಾಡಲಾಗುತ್ತಿದೆ. 250 ಹಾಸಿಗೆಯ ಐಸಿಯುನಲ್ಲಿ 100ಕ್ಕೆ ವೆಂಟಿಲೇಟರ್ ಅಳವಡಿಸಲಾಗಿರುತ್ತದೆ. ಬೌರಿಂಗ್, ನಿಮ್ಹಾನ್ಸ್, ರಾಜೀವ್ ಗಾಂಧಿ ಮೊದಲಾದ ಕಡೆ ಮೇಕ್ ಶಿಫ್ಟ್ ಆಸ್ಪತ್ರೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮುಂದೆ ಓದಿ...

ಶೇ 80ರಷ್ಟು ಹಾಸಿಗೆ ಕೋವಿಡ್‌ಗೆ ಮೀಸಲಿಡಬೇಕು; ಡಾ. ಕೆ. ಸುಧಾಕರ್ ಶೇ 80ರಷ್ಟು ಹಾಸಿಗೆ ಕೋವಿಡ್‌ಗೆ ಮೀಸಲಿಡಬೇಕು; ಡಾ. ಕೆ. ಸುಧಾಕರ್

 ವಿದೇಶದಿಂದ ರೆಮ್ಡೆಸಿವಿರ್ ಆಮದು ಮಾಡಿಕೊಳ್ಳಲು ಕ್ರಮ

ವಿದೇಶದಿಂದ ರೆಮ್ಡೆಸಿವಿರ್ ಆಮದು ಮಾಡಿಕೊಳ್ಳಲು ಕ್ರಮ

ರೆಮ್ಡೆಸಿವಿರ್ ವೈಲ್ ಗಳು ನಿರಂತರ ಪೂರೈಕೆಯಾಗುತ್ತಿವೆ. ಹೆಚ್ಚುವರಿಯಾಗಿ 25 ಸಾವಿರ ಪಡೆಯಲು ಕೇಂದ್ರ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ಅವಕಾಶ ಮಾಡಿಕೊಟ್ಟಿದ್ದಾರೆ. ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಮ್‍ದಾರ್ ಷಾ ಅವರೊಂದಿಗೂ ಚರ್ಚಿಸಿದ್ದು, 10 ದಿನದೊಳಗೆ 10 ಸಾವಿರ ವೈಲ್ ಕೊಡುವುದಾಗಿ ಹೇಳಿದ್ದಾರೆ. ಈ ತಿಂಗಳಲ್ಲೇ 50-60 ಸಾವಿರ ವೈಲ್ ನೀಡುವುದಾಗಿ ತಿಳಿಸಿದ್ದಾರೆ. ವಿದೇಶದಿಂದ ಒಂದೇ ಬಾರಿಗೆ 2 ಲಕ್ಷ ರೆಮ್ ಡಿಸಿವಿರ್ ವೈಲ್ ತರಿಸಿಕೊಳ್ಳಲು ಸಿದ್ಧತೆ ಮಾಡುತ್ತಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ಇಷ್ಟು ದೊರೆತರೆ, 15-20 ದಿನಕ್ಕೆ ಸಾಲುತ್ತದೆ ಎಂದು ತಿಳಿಸಿದರು.

"ಕೊರೊನಾ ವಿಷಯದಲ್ಲಿ ರಾಜಕೀಯ ಬೆರೆಸಬೇಡಿ"

ಕೆಲ ದೇಶಗಳಲ್ಲಿ ಮೂರನೇ ಅಲೆ ಕೂಡ ಬಂದಿದ್ದು, ಒಂದೂವರೆ ತಿಂಗಳು ಲಾಕ್ ಡೌನ್ ಮಾಡಲಾಗಿದೆ. ಆದರೆ ನಮ್ಮಲ್ಲಿ ಎಲ್ಲ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟು ಕೊರೊನಾ ನಿಯಂತ್ರಿಸಲಾಗುತ್ತಿದೆ. ಈಗ ಎಲ್ಲ ಚಟುವಟಿಕೆಗೆ ಅವಕಾಶ ನೀಡಿ, ಸೋಂಕು ನಿಯಂತ್ರಿಸಿ ಎಂದರೆ ಹೇಗೆ? ಈ ವಿಚಾರದಲ್ಲಿ ರಾಜಕೀಯ ಬೆರೆಸಬಾರದು ಎಂದರು.

ಅಘೋಷಿತ ಲಾಕ್‌ಡೌನ್‌ ಯಾಕೆ ಅಂದರೆ, ಸಚಿವ ಸುಧಾಕರ್ ಉತ್ತರ ಕೊಟ್ಟಿದ್ದು ಹೀಗೆ!ಅಘೋಷಿತ ಲಾಕ್‌ಡೌನ್‌ ಯಾಕೆ ಅಂದರೆ, ಸಚಿವ ಸುಧಾಕರ್ ಉತ್ತರ ಕೊಟ್ಟಿದ್ದು ಹೀಗೆ!

 ಮನೆ ಆರೈಕೆ ವ್ಯವಸ್ಥೆ ಬಲಪಡಿಸಲು ಸೂಚನೆ

ಮನೆ ಆರೈಕೆ ವ್ಯವಸ್ಥೆ ಬಲಪಡಿಸಲು ಸೂಚನೆ

ಪ್ರಧಾನಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಮನೆ ಆರೈಕೆ ವ್ಯವಸ್ಥೆ ಬಲಪಡಿಸಲು ಸೂಚನೆ ದೊರೆತಿದೆ. ಎಲ್ಲರೂ ಆಸ್ಪತ್ರೆಗೆ ಹೋಗುವುದರಿಂದ ವೈದ್ಯಕೀಯ ಸಿಬ್ಬಂದಿಗೆ ಹೊರೆ ಹೆಚ್ಚಿದೆ. ಟೆಲಿ ಕಾಲಿಂಗ್ ನಿಂದ ಮಾರ್ಗದರ್ಶನ, ಚಿಕಿತ್ಸೆ ನೀಡಬೇಕೆಂದು ಸೂಚಿಸಿದ್ದಾರೆ. ರಾಜ್ಯದಲ್ಲಿ ಕೈಗೊಂಡ ಬಿಗಿ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಿಸಿದ್ದಾರೆ ಎಂದರು.

"ಮೇ 1 ರಿಂದ 1,500 ಟನ್ ಪ್ರತಿ ದಿನ ಆಕ್ಸಿಜನ್ ನೀಡಬೇಕು"

ಈ ತಿಂಗಳ ಕೊನೆಗೆ ದಿನಕ್ಕೆ 1 ಸಾವಿರ ಟನ್ ಆಕ್ಸಿಜನ್ ನೀಡಬೇಕು. ಮೇ 1 ರಿಂದ 1,500 ಟನ್ ಪ್ರತಿ ದಿನ ಆಕ್ಸಿಜನ್ ನೀಡಬೇಕು. 2 ಲಕ್ಷ ವೈಲ್ ರೆಮ್ಡೆಸಿವಿರ್ ಆಮದಿಗೆ ಅನುಮತಿ ಕೊಡಬೇಕೆಂದು ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಕೋರಿದ್ದಾರೆ ಎಂದು ತಿಳಿಸಿದರು.
1912ಗೆ ಕರೆ ಮಾಡಿ: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಹೆಚ್ಚು ಸಮಸ್ಯೆಯಾದರೆ 1912ಗೆ ಕರೆ ಮಾಡಿದರೆ ಮಾರ್ಗದರ್ಶನ ದೊರೆಯುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

English summary
Minister of Health and Medical Education Dr. K. Sudhakar said that the 'Make Shift Hospitals' will be coming up in the premises of Bengaluru hospitals,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X