Get Updates
Get notified of breaking news, exclusive insights, and must-see stories!

ಲೀಷಾಗೆ ಉದ್ಯೋಗ ಕೊಟ್ಟಿಲ್ಲವೇಕೆ? ಸರ್ಕಾರಕ್ಕೆ ಕೋರ್ಟಿನಿಂದ ನೋಟಿಸ್

ಮಲ್ಲೇಶ್ವರಂನ ಬಿಜೆಪಿ ಕಚೇರಿ ಸಮೀಪ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ವಿದ್ಯಾರ್ಥಿನಿ ಲೀಷಾ ಅವರು ಸರ್ಕಾರದ ವಿರುದ್ಧ ಕೋರ್ಟಿಗೆ ದೂರು ನೀಡಿದ್ದಾರೆ.

ಬೆಂಗಳೂರು, ಜೂನ್ 12 :ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಷಾ ಅವರು ಮತ್ತೊಮ್ಮೆ ನ್ಯಾಯಕ್ಕಾಗಿ ಆಗ್ರಹಿಸಿ ಕೋರ್ಟ್ ಮೊರೆ ಹೊಕ್ಕಿದ್ದಾರೆ. ಈ ಕುರಿತಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟಿಗೆ ನೋಟಿಸ್ ಜಾರಿಗೊಳಿಸಿದೆ.

2016ರ ಅಕ್ಟೋಬರ್‌ ನಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಜೊತೆಗೆ ಪರಿಹಾರ ನೀಡುವ ಕುರಿತು ಕೇಂದ್ರ ಸರ್ಕಾರಕ್ಕೂ ಸೂಚನೆ ನೀಡಿತ್ತು.

Malleshwaram bomb blast victim Lisha files contempt case against Government

'ಅಂಗವಿಕಲ ಕೋಟಾದಡಿಯಲ್ಲಿ ಉದ್ಯೋಗ ನೀಡಬೇಕು, 1 ಕೋಟಿ ಪರಿಹಾರ ನೀಡಬೇಕು' ಎಂದು ಹೈಕೋರ್ಟಿಗೆ 2015ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಜ್ಯ ಸರ್ಕಾರವು ಪರಿಹಾರ ರೂಪದಲ್ಲಿ 8.24 ಲಕ್ಷ ರು ಮಾತ್ರ ನೀಡಿದೆ.

ದಾಳಿಗೆ ತುತ್ತಾದವರಿಗೆ ನೀಡುವ ಪರಿಹಾರ ಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ರಾಷ್ಟ್ರೀಯ ನೀತಿಯಲ್ಲಿ ಬದಲಾವಣೆ ತರಬೇಕಾದ ಅನಿವಾರ್ಯತೆ ಇದೆ. ಇದರ ಸಲುವಾಗಿ ವಿಶೇಷ ಸಮಿತಿ ನೇಮಿಸುವ ಅಗತ್ಯವಿದೆ ಎಂದು ಲಿಷಾ ಕೋರಿದ್ದರು.

2013ರ ಏಪ್ರಿಲ್ 17ರಂದು ಬೆಳಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಈ ಸಂದರ್ಭದಲ್ಲಿ ಕಾಲೇಜಿಗೆ ಹೋಗುತ್ತಿದ್ದ ಲಿಷಾ ಗಾಯಗೊಂಡಿದ್ದರು. ಕಬ್ಬಿಣದ ಚೂರುಗಳು ಅವರ ಎಡಗಾಲಿಗೆ ಹೊಕ್ಕಿತ್ತು. ಲಿಷಾ ಅವರ ಕಾಲಿಗೆ ಚಿಕಿತ್ಸೆಗೆ ಸುಮಾರು 10 ಲಕ್ಷ ರು ಖರ್ಚಾಗಿದೆ. ಮಹಾರಾಣೀಸ್ ಅಮ್ಮಣಿ ಕಾಲೇಜಿನಲ್ಲಿ ಬಿಸಿಎ ಓದುತ್ತಿರುವ ಲಿಷಾ ಅವರು ಆಸ್ಪತ್ರೆಯಲ್ಲೇ ಇದ್ದಾಗಲೇ ಸಿಇಟಿ ಬರೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+