ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

75 ಸಣ್ಣ ಉಪಗ್ರಹಗಳ ಅಭಿವೃದ್ಧಿ ಪಡಿಸಿದ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು

|
Google Oneindia Kannada News

ಬೆಂಗಳೂರು, ಜುಲೈ 09: ಬೆಂಗಳೂರಿನ ಸರ್ಕಾರಿ ಬಾಲಕರ ಹೈಸ್ಕೂಲ್ ವಿದ್ಯಾರ್ಥಿಗಳು 75 ಸಣ್ಣ ಉಪಗ್ರಹಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ವತಿಯಿಂದ ನೀಡಲಾದ 50 ಹೈ ಎಂಡ್ ಲ್ಯಾಪ್‌ಟಾಪ್‌ಗಳನ್ನು ಇದೇ ವೇಳೆ ಡಿಸಿಎಂ ಅವರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದರು.

ಬಿಎಸ್‌ಸಿ ಪ್ರವೇಶಕ್ಕೆ ಸಿಇಟಿ ಕಡ್ಡಾಯ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ!ಬಿಎಸ್‌ಸಿ ಪ್ರವೇಶಕ್ಕೆ ಸಿಇಟಿ ಕಡ್ಡಾಯ? ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸ್ಪಷ್ಟನೆ!

ಕೇಳಿದ ಕೂಡಲೇ ಉತ್ಕೃಷ್ಟ ದರ್ಜೆಯ ಲ್ಯಾಪ್‌ಟಾಪ್‌ಗಳನ್ನು ನೀಡಿದ ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ಕಾಳಜಿಯನ್ನು ಕೊಂಡಾಡಿದ ಅವರು, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವೂಡೆ ಪಿ. ಕೃಷ್ಣ ಅವರ ನೇತೃತ್ವದಲ್ಲಿ 75 ಸಣ್ಣ ಪ್ರಮಾಣ ಉಪಗ್ರಹಗಳನ್ನು ಉಡಾವಣೆ ಮಾಡಲು ಇಂಡಿಯನ್ ಟೆಕ್ನಾಲಜಿಯಲ್ಲಿ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.

bengaluru-malleshwaram-government-boys-high-school-to-develop-75-satellites-dcm

ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗುವುದು. ಇನ್ನು ಕೆಲ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು.

ಈಗಾಗಲೇ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಶೇ.65ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಲಸಿಕೀಕರಣವನ್ನು ರಾಜ್ಯಾದ್ಯಂತ ಚುರುಕುಗೊಳಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಇಂದು ಎಲ್ಲ ಜಿಲ್ಲಾಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ.

ಸರ್ಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ ಆದ್ಯತಾ ಗುಂಪಿನಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ ಎಂದು ಡಾ.ಅಶ್ವತ್ಥ ನಾರಾಯಣ್ ಹೇಳಿದರು.

Recommended Video

Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Oneindia Kannada

ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬ ಬಗ್ಗೆ ಅಂಕಿ-ಅಂಶ ಪಡೆದುಕೊಳ್ಳುತ್ತಿದ್ದೇವೆ. ಆ ಮಾಹಿತಿ ಸಿಕ್ಕಿದ ಕೂಡಲೇ ಉಳಿದ ಎಷ್ಟು ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನದಲ್ಲಿ ಲಸಿಕೆ ನೀಡಲಾಗುವುದು ಎಂಬುದನ್ನು ತಿಳಿಸಲಾಗುವುದು ಎಂದು ಹೇಳಿದರು.

English summary
The Malleshwaram Government Boys High School in Bengaluru will achieve a unique feat if things go as planned. It will become the country’s first government school to develop a satellite, Karnataka Deputy Chief Minister C N Ashwathnarayan said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X