ಮಲ್ಲೇಶ್ವರ 13 ನೇ ಅಡ್ಡರಸ್ತೆಗೆ ವೀಣೆ ದೊರೆಸ್ವಾಮಿ ಅಯ್ಯಂಗಾರ್‌ ಹೆಸರು

ಬೆಂಗಳೂರು, ಆಗಸ್ಟ್ 9: ಮಲ್ಲೇಶ್ವರದ 13ನೇ ಅಡ್ಡರಸ್ತೆಗೆ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ವೀಣೆ ದೊರೆಸ್ವಾಮಿ ಅಯ್ಯಂಗಾರ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.

ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಮಲ್ಲೇಶ್ವರ ಶಾಸಕ ಡಾ. ಅಶ್ವತ್ಥ ನಾರಾಯಣ ಮಾಹಿತಿ ಹಂಚಿಕೊಂಡಿದ್ದಾರೆ. 1920ರ ಅಕ್ಟೋಬರ್‌ 24ರಂದು ದೊರೆಸ್ವಾಮಿ ಅಯ್ಯಂಗಾರ್‌ ಅವರ ಜನ್ಮದಿನ. ಸಣ್ಣ ವಯಸ್ಸಿನಲ್ಲಿಯೇ ಮೈಸೂರು ಮಹಾರಾಜರಿಂದ ಪ್ರೋತ್ಸಾಹ ದೊರೆಯಿತು.

ತಮ್ಮ ಆರನೇ ವಯಸ್ಸಿನಲ್ಲೇ ಪ್ರಬುದ್ಧ ವೀಣಾವಾದಕರಾಗಿದ್ದ ದೊರೆಸ್ವಾಮಿಯವರು ಅವರು ತಮ್ಮ ಹತ್ತನೇ ವಯಸ್ಸಿನಲ್ಲೇ ಮಹಾಜರೆದುರು ವೀಣೆ ನುಡಿಸಿ 50 ಬೆಳ್ಳಿರೂಪಾಯಿಗಳ ಬಹುಮಾನ ಪಡೆದಿದ್ದರು. ದೊರೆಸ್ವಾಮಿ ಅಯ್ಯಂಗಾರರು ವೀಣೆ ಮತ್ತು ಕೊಳಲುಗಳೆರಡರಲ್ಲೂ ಪರಿಣತಿ ಹೊಂದಿದ್ದು, ರಾಜ ಕುಟುಂಬದವರಿಗೆ ವೀಣೆ ಮತ್ತು ಕೊಳಲುವಾದನದ ಪಾಠ ಹೇಳುತ್ತಿದ್ದರು.

ಇವರಿಗೆ ಮೈಸೂರು ವಿಶ್ವವಿದ್ಯಾಲಯವು 1975ರಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿತು. ಭಾರತ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸಹಾ ದೊರೆಸ್ವಾಮಿ ಅಯ್ಯಂಗಾರ್ ಅವರು ಕಾರ್ಯ ನಿರ್ವಹಿಸಿದ್ದರು. ೧೯೮೫ರ ವರ್ಷದಲ್ಲಿ ಅಖಿಲ ಭಾರತ ಕರ್ನಾಟಕ ಸಂಗೀತ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಕವಿ ಪು. ತಿ. ನ ಅವರ ಆತ್ಮೀಯರಾಗಿದ್ದ ದೊರೆಸ್ವಾಮಿ ಅಯ್ಯಂಗಾರ್ ಅವರು ಕರ್ನಾಟಕ ಸರ್ಕಾರವು ಪು. ತಿ. ನ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ಟ್ರಸ್ಟಿನ ಅಧ್ಯಕ್ಷರಾಗಿದ್ದರು. ದೊರೆಸ್ವಾಮಿ ಅಯ್ಯಂಗಾರ್ ಅವರು ಅತ್ಯುತ್ತಮ ಬರಹಗಾರರೂ ಆಗಿದ್ದು 'ವೀಣೆಯ ನೆರಳಿನಲ್ಲಿ' ಎಂಬುದು ಅವರ ಪ್ರಸಿದ್ಧ ಕೃತಿಯಾಗಿದೆ.

Malleshwaram road will be named after Veene Doreswamy Iyengar

ದೊರೆಸ್ವಾಮಿ ಅಯ್ಯಂಗಾರರ ಲಲಿತ ಬರಹಗಳು ನಾಡಿನಾದ್ಯಂತ ಮೆಚ್ಚುಗೆ ಗಳಿಸಿದ್ದವು. ಅಂದಿನ ತಲೆಮಾರಿನ ಸಂಗೀತಜ್ಞರ ಕುರಿತು ಅವರಲ್ಲಿ ಜ್ಞಾನ ಭಂಡಾರವೇ ತುಂಬಿತ್ತು. ಅವರು 1992ರ ಅಕ್ಟೋಬರ್‌ನಲ್ಲಿ ನಿಧನರಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+