ಬಿಜೆಪಿಯಿಂದ ಸಿಬಿಐ ದುರ್ಬಳಕೆ: ಮಲ್ಲಿಕಾರ್ಜುನ ಖರ್ಗೆ ಆರೋಪ
ಬೆಂಗಳೂರು, ಅಕ್ಟೋಬರ್ 27: ಬಿಜೆಪಿ ತನ್ನ ಸ್ವಾರ್ಥಕ್ಕಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಫ್ರಾನ್ಸ್ ಜೊತೆ ಮಾಡಿಕೊಳ್ಳಲಾದ ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಅನೇಕ ದೂರುಗಳು ಸಿಬಿಐಗೆ ಬಂದಿದ್ದವು. ಸಿಬಿಐ ಈ ಎಲ್ಲ ದೂರುಗಳನ್ನೂ ಪರಿಶೀಲನೆ ಮಾಡುತ್ತಿತ್ತು.
ಇದನ್ನು ತಿಳಿದ ಪ್ರಧಾನಿ ನರೇಂದ್ರ ಮೋದಿ ಸಿಬಿಐ ನಿರ್ದೇಶಕರನ್ನು ರಾತ್ರೋ ರಾತ್ರಿ ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದಾರೆ. ಅವರ ಸ್ಥಾನಕ್ಕೆ ಬೇರೊಬ್ಬರನ್ನು ತಂದುಕೂರಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ರಫೇಲ್ ಎಂಜಿನ್ ತಯಾರಿಕೆಗೆ 560 ಕೋಟಿ ರೂ ವೆಚ್ಚದ ಯೋಜನೆಯನ್ನು ಎಚ್‌ಎಎಲ್‌ಗೆ ನೀಡಲಾಗಿತ್ತು. ಆದರೆ, ಬಿಜೆಪಿ ನೇತೃತ್ವದ ಸರ್ಕಾರ 1600 ಕೋಟಿಗೆ ಒಪ್ಪಂದ ಮಾಡಿಕೊಂಡಿದ್ದು, ಅದರ ನಿರ್ಮಾಣ ಪಾಲುದಾರಿಕೆಯನ್ನು ಎಚ್‌ಎಎಲ್ ಬದಲು ರಿಲಯನ್ಸ್‌ಗೆ ದಕ್ಕುವಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.












Click it and Unblock the Notifications