ಮದುವೆಯಾಗ್ತೀನಿ ಎಂದು ನಂಬಿಸಿ ವಿಧವೆಯರಿಗೆ ಮೋಸ ಮಾಡ್ತಿದ್ದ ವ್ಯಕ್ತಿ ಸೆರೆ
ಬೆಂಗಳೂರು, ಜನವರಿ 16: ಮದುವೆಯಾಗುವುದಾಗಿ ನಂಬಿಸಿ 16 ವಿಧವೆಯರಿಗೆ ಹಾಗೂ ವಿಚ್ಛೇದಿತೆಯರಿಗೆ ಮೋಸ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಡಿಎಂ ರಾಮಕೃಷ್ಣ(46) ಬಂಧಿತ, ವಿಧವೆಯರು, ವಿಚ್ಛೇದಿತೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಕೆಲವರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಅವರಿಂದ ಹಣವನ್ನು ದೋಚಿ ಪರಾರಿಯಾಗುತ್ತಿದ್ದ. ಈಗಾಗಲೇ 16ಕ್ಕೂ ಹೆಚ್ಚು ಮಹಿಳೆಯರಿಗೆ ಈತ ಮೋಸ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
2006ರಿಂದ ರಾಮಕೃಷ್ಣ ಈ ದಂದೆಗೆ ಇಳಿದಿದ್ದ. ರಾಜ್ಯದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡದ ಮಹಿಳೆಯರಿಗೆ ಈತ ಮದುವೆಯಾಗುವುದಾಗಿ ನಂಬಿಸಿದ್ದ. ಇಷ್ಟೇ ಅಲ್ಲದೆ ವಧು ಬೇಕಾಗಿದ್ದಾರೆ ಎಂದು ದಿನಪತ್ರಿಕೆಗಳಲ್ಲಿ ಜಾಹೀರಾತು ಕೂಡ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಸುಳ್ಳು ದಾಖಲೆ ಸೃಷ್ಟಿಸಿ ಹೊಸ ಸಿಮ್ ಕಾರ್ಡ್ಗಳನ್ನು ಖರೀದಿ ಮಾಡುತ್ತಿದ್ದ. ಬಳಿಕ ವಿಚ್ಛೇದಿತೆಯರು, ವಿಧವೆಯರ ಬಳಿ ಹಣ ಪಡೆದು ಅಲ್ಲಿಂದ ಪರಾರಿಯಾಗಿ ಬೇರೆ ಸಿಮ್ ಖರೀದಿಸುತ್ತಿದ್ದ. ಸರ್ಕಾರಿ ಕೆಲಸ ಕೊಡಿಸುವುದಾಗಿ ಕೂಡ ವಂಚನೆ ಮಾಡುತ್ತಿದ್ದ. ತಾನು ಆರೋಗ್ಯ ಇಲಾಖೆಯ ಅಧಿಕಾರಿ ಎಂದು ಹೇಳಿ ಯಾಮಾರಿಸುತ್ತಿದ್ದ. ವಿವಿಧ ಉದ್ಯೋಗವನ್ನರಸಿ ಬರುತ್ತಿದ್ದವರನ್ನು ಯಾಮಾರಿಸಿ 22 ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಅವರಿಂದ ಪಡೆದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Live-in Couples: 2027ರ ಜನಗಣತಿ: ಲಿವ್-ಇನ್ ಸಂಬಂಧದಲ್ಲಿರುವವರಿಗೂ ವಿವಾಹಿತ ದಂಪತಿ ಸ್ಥಾನಮಾನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications