ಪತ್ನಿ ಜತೆ ಜಗಳ ಮಾಡಿದ ಮೂರನೇ ದಿನಕ್ಕೆ ಕೊಲೆಯಾದ ಪತಿ!
ಬೆಂಗಳೂರು, ಜು. 03: ಪತ್ನಿಯೊಂದಿಗೆ ಜಗಳ ಮಾಡಿ ಮೂರು ದಿನ ಕಳೆಯುವಷ್ಟರಲ್ಲಿ ಪತಿ ಹತ್ಯೆಯಾಗಿದ್ದಾನೆ. ಮೊದಲ ಪತ್ನಿಯನ್ನು ತೊರೆದಿದ್ದ ಕೃಷ್ಣಮೂರ್ತಿ ಎರಡನೇ ಮದುವೆಯಾಗಿದ್ದ. ಎರಡನೇ ಪತ್ನಿ ಜತೆಗೂ ಪದೇ ಪದೇ ಜಗಳ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೃಷ್ಣಮೂರ್ತಿಯನ್ನು ಕೊಲೆ ಮಾಡಿದ್ದಾರೆ. ಪತ್ನಿಯೇ ಕೊಲೆ ಮಾಡಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಡಿ.ಜೆ. ಹಳ್ಳಿ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಡಿ.ಜೆ.ಹಳ್ಳಿ ನಿವಾಸಿ ಕೃಷ್ಣಮೂರ್ತಿ ಕೊಲೆಯಾದ ವ್ಯಕ್ತಿ. ಕಾವಲ್ ಭೈರಸಂದ್ರದ ಅಂಬೇಡ್ಕರ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೂವರು ಕೃತ್ಯ ಎಸಗಿರುವ ಬಗ್ಗೆ ಸುಳಿವು ಸಿಕ್ಕಿದೆ.

Recommended Video
ಈ ಕುರಿತು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಪದೇ ಪದೇ ಎರಡನೇ ಪತ್ನಿ ಜತೆ ಜಗಳ ಮಾಡುತ್ತಿದ್ದ ಕೃಷ್ಣಮೂರ್ತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃಷ್ಣಮೂರ್ತಿ ತನ್ನ ಎರಡನೇ ಪತ್ನಿ ಜತೆ ಜಗಳ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪೊಲೀಸರೇ ಬುದ್ಧಿವಾದ ಹೇಳಿ ಕಳಿಸಿದ್ದರು. ಇದೀಗ ಮತ್ತೆ ಜಗಳ ಮಾಡಿಕೊಂಡಿದ್ದ ಕೃಷ್ಣಮೂರ್ತಿಯನ್ನು ಪತ್ನಿಯೇ ಹತ್ಯೆ ಮಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಡಿ.ಜೆ.ಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications