ಹೆಂಡತಿ ಕಿರುಕುಳದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು, ಮೇ 22: ಹೆಂತಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ಕುಟುಂಬದವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಂಜುನಾಥನಗರದ ನಿವಾಸಿ ಎಸ್‌. ಶ್ರೀನಿವಾಸ್(34) ಆತ್ಮಹತ್ಯೆ ಮಾಡಿಕೊಂಡವರು. ಶ್ರೀನಿವಾಸ್ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ತೆರಳಿದ್ದ ಮೃತರ ಕುಟುಂಬದವರು ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ.

ಈ ಘಟನೆ ಕುರಿತು ಮೃತನ ಪತ್ನಿ ಸುಮಾ ಅವರ ತಂದೆ ಗಂಗಣ್ಣ, ತಾಯಿ ವಿರುದ್ಧ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Man commits suicide blames wife in-laws in note

ಮದುವೆ ನಂತರ ಸೋದರನಿಗೆ ಆತನ ಪತ್ನಿ ಹಾಗೂ ಆಕೆಯ ಕುಟುಂಬದ ಸದಸ್ಯರು ಕಿರುಕುಳ ಕೊಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವುದು ತಡಾವದರೆ ಬೈಯ್ಯುತ್ತಿದ್ದರು. ಅವರ ವರ್ತನೆಯಿಂದ ಸೋದರ ತುಂಬಾ ಬೇಸರಗೊಂಡಿದ್ದ ಎಂದು ಮೃತನ ಸೋದರ ರವೀಶ್ವರ್ ದೂರಿನಲ್ಲಿ ಆರೋಪಿಸಿದ್ದಾರೆ.

ಮೃತನ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಪತ್ನಿ ಆಕೆಯ ಕುಟುಂಬದವರೇ ಕಾರಣ ಎಂದು ಬರೆದಿದ್ದರು. ಒಂದೂವರೆ ವರ್ಷದ ಹಿಂದೆ ಸುಮಾ ಜೊತೆ ಶ್ರೀನಿವಾಸ್ ವಿವಾಹವಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+