BMTC: ನಿಲ್ಲದ ಸಾವಿನ ಸರಣಿ: ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಬೆಂಗಳೂರು, ಜನವರಿ 06: ಬೈಕ್​​ಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಎಳಂಗೋವನ್ ಸೆಂಕತ್ತವಲ್ (43) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ನಿನ್ನೆ (ಜನವರಿ 05) ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಬಸ್​ ಡಿಕ್ಕಿ ರಭಸಕ್ಕೆ ಬೈಕ್​ ಸವಾರ ಕೆಳಗೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

Man Dies In BMTC Volvo Bus Accident At Marathahalli

ಅಪಘಾತದ ಭೀಕರತೆಗೆ ಎಳಂಗೋವನ್ ಸೆಂಕತ್ತವಲ್ ಅವರ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯರು ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ದುರಾದೃಷ್ಟವಶಾತ್‌ ಮಾರ್ಗ ಮಧ್ಯೆಯೇ ಎಳಂಗೋವನ್ ಸೆಂಕತ್ತವಲ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹೆಚ್​ಎಎಲ್​​ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್‌ ಡಿಕ್ಕಿ: ಮಹಿಳೆ ಸಾವು

ಬಿಎಂಟಿಸಿ ಬಸ್‌ಗಳ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ವಾರವಷ್ಟೇ ಬಸ್‌ ಡಿಕ್ಕಿಯಾಗಿ ಮಹಿಳೆ ರಸ್ತೆಯಲ್ಲೇ ಸಾವನ್ನಪ್ಪಿದ್ದರು. ನಗರದ ಸುಬ್ಬಯ್ಯ ಸರ್ಕಲ್ ಬಳಿ ಈ ಅಪಘಾತ ನಡೆದಿದ್ದು, ಪುಷ್ಪ (51) ಎನ್ನುವ ಮಹಿಳೆ ಬಿಎಂಟಿಸಿ ಚಾಲಕನ ಅಜಾಗರುಕತೆಗೆ ಬಲಿಯಾಗಿದ್ದರು.

ಪುಷ್ಪ ನಗರದ ಕಬ್ಬನ್ ಪೇಟೆ ನಿವಾಸಿಯಾಗಿದ್ದು, ಮನೆಯಿಂದ ಬೇಕರಿಗೆ ತೆರಳುತಿದ್ದ ವೇಳೆ ಘಟನೆ ನಡೆದಿತ್ತು. ಮಹಿಳೆ ರಸ್ತೆ ದಾಟುವಾಗ ಎದುರಿಗೆ ಬಂದ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಏಕಾಏಕಿ ಡಿಕ್ಕಿಯಾಗಿತ್ತು ಘಟನೆಯಲ್ಲಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಡಿಸೆಂಬರ್‌ 28ರಂದು ಸಾವನ್ನಪ್ಪಿದ್ದರು.

ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕ ನಾಗರಾಜ್ ಎನ್ನುವಾತನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಲ್ಲಿ ಬಿಎಂಟಿಸಿ ಬಸ್‌ಗಳಿಂದ ನಗರದಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವರ್ಷಗಳಲ್ಲಿ ಬಿಎಂಟಿಸಿ ಬಸ್‌ ಅಪಘಾತದಲ್ಲಿ 40ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+