ಬೆಂಗಳೂರು: ಜಿಟಿ ಮಾಲ್ ಲಿಫ್ಟ್ ನಲ್ಲಿ ಸಿಲುಕಿ ಕಾರ್ಮಿಕ ಸಾವು
ಬೆಂಗಳೂರು, ಅಕ್ಟೋಬರ್ 20: ನಗರದ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ವರ್ಲ್ಡ್ ಮಾಲ್ ನಲ್ಲಿ ಲಿಫ್ಟ್ ಗೆ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರನ್ನು ರಕ್ಷಿಸಲಾಗಿದೆ.
ಮೃತಪಟ್ಟವರನ್ನು ಶ್ರೀನಿವಾಸ್ (40) ಎಂದು ಗುರುತಿಸಲಾಗಿದೆ. ಶುಕ್ರವಾರ ಮಾಲ್ ನಲ್ಲಿರುವ ಬಿಗ್ ಬಜಾರ್ ನಲ್ಲಿ ಮೆಟೀರಿಯಲ್ ಅನ್ಲೋಡ್ ಮಾಡುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕೆಟ್ಟು ನಿಂತಿದೆ. ಶೀಘ್ರವೇ ಲಿಫ್ಟ್ ದುರಸ್ತಿ ಕಾರ್ಯ ನಡೆಯದ ಕಾರಣ ಶ್ರೀನಿವಾಸ್ ಮೃತಪಟ್ಟಿದ್ದಾರೆ.

ಇದೇ ಲಿಫ್ಟ್ ನಲ್ಲಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕದ ಸಿಬ್ಬಂದಿ ರಕ್ಷಿಸಿದ್ದಾರೆ. ಸ್ಥಳಕ್ಕೆ ಕೆಪಿ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.












Click it and Unblock the Notifications