ಅವಳಿ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ
ಬೆಂಗಳೂರು, ಅ. 1 : ದಸರಾ ಹಬ್ಬದ ಸಂಭ್ರಮ ಈ ಮನೆಯಲ್ಲಿಲ್ಲ. ಇಡಿ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ ಬುಧವಾರ ಹೃದಯ ವಿದ್ರಾವಕ ಘಟನೆ ನಡೆದಿದೆ.
ಹೆಂಡತಿ ಸಾವಿನಿಂದ ಮನನೊಂದು ಸ್ವತಃ ತಂದೆಯೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.(ತಾಯಿಯ ಸಾವಿನಿಂದ ಮನನೊಂದ ಯುವಕ ಆತ್ಮಹತ್ಯೆ)

ನಾಲ್ಕು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಅಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ರಾಜಾಜಿನಗರದ ಕುಮರೇಶ್(40) ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications