ಬೆಂಗಳೂರಲ್ಲಿ ಯುವತಿ ಮೇಲೆ ಗುಂಡಿನ ದಾಳಿ
ಬೆಂಗಳೂರು, ಫೆಬ್ರವರಿ 25 : ಉದ್ಯಾನ ನಗರಿ ಬೆಂಗಳೂರು ನಗರದಲ್ಲಿ ಯುವತಿ ಮೇಲೆ ಗುಂಡಿನ ದಾಳಿ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಮಂಜುನಾಥ ಲೇಔಟ್‌ನಲ್ಲಿರುವ ಮಹಿಳೆಯ ಪಿಜಿ ಮುಂದೆ ಗುಂಡಿನ ದಾಳಿ ನಡೆದಿದೆ. ನಿಮ್ಹಾನ್ಸ್ ಉದ್ಯೋಗಿ ಶುಭಶ್ರೀ ಪ್ರಿಯದರ್ಶಿನಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿ, ಪರಾರಿಯಾಗಿದ್ದಾನೆ.

7.65 ಕಂಟ್ರಿ ಮೇಡ್ ಪಿಸ್ತೂಲ್ ಬಳಸಿ ಆರೋಪಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆಗಾಗಿ 2 ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.
ಶುಭಶ್ರೀ ಓಡಿಶಾ ಮೂಲದವಳು ಎಂದು ತಿಳಿದು ಬಂದಿದೆ. ಶುಭಶ್ರೀಗೆ ಪರಿಚಯವಿದ್ದ ವ್ಯಕ್ತಿಯೇ ಗುಂಡಿನ ದಾಳಿ ನಡೆಸಿದ್ದಾನೆಯೇ? ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications