ಬಾರ್ ಗರ್ಲ್‌ಗೆ ದುಬಾರಿ ಉಡುಗೊರೆ ನೀಡಲು ವ್ಯಕ್ತಿ ಮಾಡಿದ್ದೇನು?
ಬೆಂಗಳೂರು, ಜನವರಿ 29: ಬಾರ್ ಗರ್ಲ್‌ಗೆ ದುಬಾರಿ ಉಡುಗೊರೆ ನೀಡಲು ವ್ಯಕ್ತಿಯೊಬ್ಬ ವಾಚ್ ಅಂಗಡಿಗೆ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಾಗವಾರದ ನಿವಾಸಿ ಸೈಯದ್ ಮೊಹಮ್ಮದ್ ಫೈಸಲ್ ಹಾಗೂ ಆತನ ಸಹಚರ ದೊಡ್ಡ ಬೆಟ್ಟಹಳ್ಳಿಯ ಮಹಮದ್ ಯೂಸುಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 6.5 ಲಕ್ಷ ಮೌಲ್ಯದ ವಿವಿಧ ಕಂಪನಿಯ ವಾಚುಗಳು, ಸೌಂದರ್ಯ ವರ್ಧಕಗಳು ಹಾಗೂ ಬೆಲೆ ಬಾಳುವ ಸಿಗರೇಟ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಅಶೋಕನಗರ ಮತ್ತು ವಿಲ್ಸನ್ ಗಾರ್ಡನ್ ಸರಹದ್ದಿನಲ್ಲಿ ರಾತ್ರಿ ವೇಳೆ ಅಂಗಡಿಗಳ ಕಳ್ಳತನ ಹೆಚ್ಚಾಗಿದ್ದವು. ಈ ಸರಣಿ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಸಿಸಿಟಿವಿ ಕ್ಯಾಮರಾ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೋಜಿನ ಜೀವನಕ್ಕೆ ಬಿದ್ದಿದ್ದ ಫೈಸಲ್‌ಗೆ ಬಾರ್ ಗರ್ಲ್ಸ್‌ಗಳ ಮೇಲೆ ವಿಪರೀತ ವ್ಯಾಮೋಹವಿತ್ತು. ದುಬಾರಿ ಉಡುಗೊರೆ ನೀಡುವ ಮೂಲಕ ಆ ಯುವತಿಯರ ಒಲವು ಗಳಿಸಿಕೊಳ್ಳಲು ಆತ ಪ್ರಯತ್ನಿಸುತ್ತಿದ್ದ. ಇದಕ್ಕಾಗಿಯೇ ಸೌಂದರ್ಯವರ್ಧಕ ಹಾಗೂ ವಾಚ್ ಮಾರಾಟ ಮಳಿಗೆಗಳನ್ನ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ.
ರಾತ್ರಿ ವೇಳೆ ಕಳ್ಳತನಕ್ಕೆ ಬಂದ ಫೈಸಲ್ ತನ್ನ ಗೆಳೆಯನಿಗೆ ವಿಡಿಯೋ ಕಾಲ್ ಮಾಡಿ ತಾನು ಕಳ್ಳತನ ಮಾಡುವುದನ್ನು ತೋರಿಸುತ್ತಿದ್ದ. ಇತ್ತೀಚೆಗೆ ಅಶೋಕನಗರ ವ್ಯಾಪ್ತಿಯಲ್ಲಿ ಅಂಗಡಿ ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈ ಕಳ್ಳರು ಸಿಕ್ಕಿಬಿದ್ದಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications